HomeKarnatakaಶಾಲೆಗಳಲ್ಲಿ ಯೋಗ ಕಡ್ಡಾಯ, ಕಲಿಕೆಗೆ ಶಿಕ್ಷಕರ ನೇಮಕ

ಶಾಲೆಗಳಲ್ಲಿ ಯೋಗ ಕಡ್ಡಾಯ, ಕಲಿಕೆಗೆ ಶಿಕ್ಷಕರ ನೇಮಕ

ಮೈಸೂರು: ಶಾಲಾ ಮಟ್ಟದಲ್ಲಿಯೇ ಮಕ್ಕಳಿಗೆ ಯೋಗ ಕಲಿಸಿಕೊಡಬೇಕೆನ್ನುವ ಉದ್ದೇಶದಿಂದ ನಮ್ಮ ಸರ್ಕಾರ ಮತ್ತೆ ಶಾಲೆಗಳಲ್ಲಿ ಯೋಗವನ್ನು ಕಡ್ಡಾಯ ಮಾಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಅನೇಕ ವರ್ಷಗಳಿಂದ ಶಾಲೆಗಳಲ್ಲಿ ಯೋಗ, ದೈಹಿಕ ಶಿಕ್ಷಣವನ್ನು ಮಕ್ಕಳಿಗೆ ಹೇಳಿಕೊಡಲಾಗುತ್ತಿತ್ತು. ಆದರೆ, ಹಿಂದಿನ ಬಿಜೆಪಿ ಸರ್ಕಾರ ಈ ಪದ್ಧತಿಯನ್ನು ನಿಲ್ಲಿಸಿದ್ದು, ಈಗ ನಮ್ಮ ಸರ್ಕಾರ ಮತ್ತೆ ಯೋಗ ಶಿಕ್ಷಣ ಆರಂಭಿಸಿದೆ ಎಂದು ತಿಳಿಸಿದ್ದಾರೆ.

ಶಾಲಾ ಮಟ್ಟದಲ್ಲಿ ಮಕ್ಕಳಿಗೆ ಯೋಗವನ್ನು ರೂಢಿಸಿಕೊಳ್ಳಬೇಕೆಂಬ ಉದ್ದೇಶದಿಂದ ನಮ್ಮ ಸರ್ಕಾರ ಮತ್ತೆ ಶಾಲೆಗಳಲ್ಲಿ ಯೋಗವನ್ನು ಕಡ್ಡಾಯ ಮಾಡಿದ್ದು, ಈ ಹಿನ್ನೆಲೆಯಲ್ಲಿ ಯೋಗ ಶಿಕ್ಷಕರನ್ನು ನೇಮಕ ಮಾಡಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular