ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಫೋನ್ ನಿಷೇಧ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿದೆ. ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಕುರಿತು ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ.
ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮೊಬೈಲ್ ನಿಷೇಧ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ. 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆಗೆ ಕಡಿವಾಣ ಹಾಕಲು ಚಿಂತನೆ ನಡೆದಿದೆ. ಈ ಬಗ್ಗೆ ವಿಶ್ವವಿದ್ಯಾಲಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.
ಇದೇ ವೇಳೆ ವಿಶ್ವವಿದ್ಯಾಲಯ ಕ್ಯಾಂಪಸ್‌ಗಳನ್ನು ಮಾದಕವಸ್ತು ಮುಕ್ತಗೊಳಿಸಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಅಲ್ಲದೇ ವಿದ್ಯಾರ್ಥಿ ಚುನಾವಣೆಗಳ ಪುನರಾರಂಭದ ಕುರಿತೂ ಚರ್ಚೆ ನಡೆಸಿದ್ದಾರೆ.
ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಕುರಿತ ವಿಚಾರವಾಗಿ ಮುಖ್ಯಮಂತ್ರಿಗಳು ವಿಸಿಗಳಿಂದಲೂ ಅಭಿಪ್ರಾಯ ಕೇಳಿದ್ದು, ಪ್ರಸ್ತಾಪಕ್ಕೆ ವಿಶ್ವವಿದ್ಯಾಲಯದ ಕುಲಪತಿಗಳಿಂದಲೂ ಒಪ್ಪಿಗೆ ಸಿಕ್ಕಿದೆ.
16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆಗೆ ಕಡಿವಾಣ ಹಾಕಬೇಕಿದ್ದು, ಆಸ್ಟ್ರೇಲಿಯಾ ಸೇರಿದಂತೆ ಅನೇಕ ದೇಶಗಳಲ್ಲಿ ಈ ನಿಯಮ ಜಾರಿಯಲ್ಲಿದೆ. ಸೋಷಿಯಲ್ ಮೀಡಿಯಾಗಳಿಂದ ವಿದ್ಯಾರ್ಥಿಗಳು ಹಾಳಾಗುತ್ತಿರುವ ಆರೋಪ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಮೊಬೈಲ್ ಬಳಕೆ ನಿಷೇಧಕ್ಕೆ ಚಿಂತನೆ ನಡೆದಿದೆ.
ಹಾಗಾಗಿ ಶೀಘ್ರದಲ್ಲೇ ರಾಜ್ಯದ ಸ್ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ನಿಷೇಧವಾಗುವ ಸಾಧ್ಯತೆ ದಟ್ಟವಾಗಿದ್ದು, ಸರ್ಕಾರದ ಅಂತಿಮ್ ಅತೀರ್ಮಾನದ ಬಗ್ಗೆ ಕಾದುನೋಡಬೇಕಿದೆ.

