ಫೆ. 28ರಂದು ರಾಜ್ಯಾದ್ಯಂತ ಏಕಕಾಲಕ್ಕೆ ಎಲ್ಲಾ ಶಾಲಾ, ಕಾಲೇಜು, ಕಚೇರಿಗಳಲ್ಲಿ ‘ಪ್ರತಿಜ್ಞಾ ವಿಧಿ’ ಸ್ವೀಕಾರ | National Science Day

ಬೆಂಗಳೂರು: ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಫೆಬ್ರವರಿ 28ರಂದು ಶುಕ್ರವಾರ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುತ್ತೇವೆ ಎಂಬ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮ ಆಯೋಜಿಸಲಾಗಿದೆ. ರಾಜ್ಯಾದ್ಯಂತ ಏಕಕಾಲಕ್ಕೆ ಎಲ್ಲಾ ಶಾಲಾ, ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ಕಾರ್ಯಕ್ರಮ ನಡೆಯಲಿದೆ.

ಶಾಂತಿ ಹಾಗೂ ಸಹೋದರತ್ವವನ್ನು ಸಮಾಜದಲ್ಲಿ ಸಾರುವ ಹಿನ್ನೆಲೆಯಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ನಾಗರಿಕರಲ್ಲಿ ಬೆಳೆಸುವುದು ಪ್ರಸ್ತುತ ಕಾಲಘಟ್ಟದಲ್ಲಿ ಅವಶ್ಯವಾಗಿದ್ದು, ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವನೆಯನ್ನು ಬೆಳೆಸಿಕೊಳ್ಳುವುದು ನಮ್ಮ ಭಾರತ ಸಂವಿಧಾನದ ಮೂಲಭೂತ ಕರ್ತವ್ಯಗಳಲ್ಲಿ ಒಂದಾಗಿದೆ.

ಈ ನಿಟ್ಟಿನಲ್ಲಿ ಫೆಬ್ರವರಿ 28 ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಏಕಕಾಲದಲ್ಲಿ ವೈಜ್ಞಾನಿಕ ಮನೋಭಾವನೆ ಹಾಗೂ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವಂತೆ ಪ್ರತಿಜ್ಞಾವಿಧಿ ಸ್ವೀಕರಿಸಿ, ಮೂಲಭೂತ ಕರ್ತವ್ಯಗಳನ್ನು ಪಾಲಿಸುವ ಮೂಲಕ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ಆದ್ದರಿಂದ ಎಲ್ಲಾ ಶಾಲಾ-ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಈ ಪ್ರತಿಜ್ಞಾ ವಿಧಿ ಸ್ವೀಕರಿಸಲು ಕ್ರಮವಹಿಸುವಂತೆ ಈ ಮೂಲಕ ಕೋರಲಾಗಿದೆ.

ಪ್ರತಿಜ್ಞಾ ವಿಧಿಯನ್ನು ದಿನಾಂಕ:28.02.2025 ಶುಕ್ರವಾರದಂದು ಪೂರ್ವಾಹ್ನ 10.30 ಕ್ಕೆ ರಾಜಾದ್ಯಂತ ಏಕಕಾಲಕ್ಕೆ ಸ್ವೀಕರಿಸುವುದು ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read