BIG NEWS : ಇಂದಿನಿಂದ ರಾಜ್ಯಾದ್ಯಂತ ಶಾಲೆಗಳು ಆರಂಭ : ಮಕ್ಕಳನ್ನು ವಿಶೇಷವಾಗಿ ಸ್ವಾಗತಿಸಲು ‘ಶಿಕ್ಷಣ ಇಲಾಖೆ’ ಸೂಚನೆ

ಬೆಂಗಳೂರು : ಬೇಸಿಗೆ ರಜೆ ಮುಗಿದು ಇಂದಿನಿಂದ ಶಾಲೆಗಳು ಪುನರಾರಂಭವಾಗುತ್ತಿದೆ. . ಇಂದಿನಿಂದ ರಾಜ್ಯಾದ್ಯಂತ ಶಾಲೆಗಳು ಆರಂಭ ವಾಗುತ್ತಿದ್ದು, ಮಕ್ಕಳನ್ನು ವಿಶೇಷವಾಗಿ ಸ್ವಾಗತಿಸಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಈ ಸಲುವಾಗಿ ಶಿಕ್ಷಕರು, ಮುಖ್ಯಶಿಕ್ಷಕರು ಮತ್ತು ಇತರೆ ಸಿಬ್ಬಂದಿ ಮೇ 29ರಂದು ರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಜರಾಗಬೇಕು. ಶಾಲಾ ಆವರಣ, ಕೊಠಡಿಗಳು, ಶೌಚಾಲಯ, ಮೇಲ್ಚಾವಣಿ ಹಾಗೂ ಬಿಸಿಯೂಟದ ಪರಿಕರಗಳನ್ನು ಸ್ವಚ್ಛಗೊಳಿಸಬೇಕು. ತಳಿರು ತೋರಣ, ರಂಗೋಲಿ ಬಿಡಿಸಿ ಶಾಲೆಗಳನ್ನು ಅಲಂಕರಿಸಬೇಕು. ಮೇ 30ರಂದು ಮಕ್ಕಳನ್ನು ಸ್ವಾಗತಿಸಲು ಎಲ್ಲ ಶಾಲೆಗಳು ಸಜ್ಜುಗೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ. ಬಿಸಿಯೂಟಕ್ಕೆ ಅಗತ್ಯವಾದ ಪಡಿತರ, ಬೇಳೆ, ತರಕಾರಿ, ಮೊಟ್ಟೆ ತಂದಿಟ್ಟುಕೊಳ್ಳಬೇಕು. ಶುದ್ಧ ಕುಡಿಯುವ ನೀರು ಸಂಗ್ರಹಿಸಬೇಕು. ಅಡುಗೆ ಸಿಬ್ಬಂದಿ, ಸಹಾಯಕ ಆರೋಗ್ಯ ತಪಾಸಣೆ ನಡೆಸಬೇಕು. ಸಿಹಿಯೂಟದ ಜತೆಗೆ ಮೊದಲ ದಿನವೇ ಬೇಯಿಸಿದ ಮೊಟ್ಟೆ ವಿತರಣೆ ಮಾಡಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read