ಬೆಂಗಳೂರು: ಬೇಸಿಗೆ ರಜೆ ಮುಗಿದು ಮೇ 29 ರಿಂದ ಶಾಲೆಗಳು ಪುನರಾರಂಭವಾಗುತ್ತಿವೆ. ಈಗಾಗಲೇ ಶಾಲೆಯ ಪ್ರಾರಂಭೋತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಆಡುಗೋಡಿಯ ಪಟೇಲ್ ಮುನಿಚಿನ್ನಪ್ಪ ಪ್ರೌಢಶಾಲೆ- ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಶಾಲಾ ಪ್ರಾರಂಭೋತ್ಸವ ಉದ್ಘಾಟಿಸಲಿದ್ದಾರೆ.
ಶಿಕ್ಷಕರು, ಮುಖ್ಯ ಶಿಕ್ಷಕರು, ಎಸ್.ಡಿ.ಎಂ.ಸಿ. ಸದಸ್ಯರು ಈಗಾಗಲೇ ಮಕ್ಕಳ ಸ್ವಾಗತಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ. ಅನೇಕ ಖಾಸಗಿ ಶಾಲೆಗಳಲ್ಲಿ ಈಗಾಗಲೇ ತರಗತಿ ಆರಂಭಿಸಲಾಗಿದೆ. ಸರ್ಕಾರಿ ಶಾಲೆಗಳು ಇಂದಿನಿಂದ ಅಧಿಕೃತವಾಗಿ ಪುನರಾರಂಭವಾಗಲಿವೆ.
ಮಳೆ ಕಾರಣದಿಂದಾಗಿ ಕೊಡಗು ಜಿಲ್ಲೆಯಲ್ಲಿ ಶಾಲೆಗಳಿಗೆ ಎರಡು ದಿನ ರಜೆ ನೀಡಲಾಗಿದೆ ಸಂಭ್ರಮದಿಂದ ಶಾಲೆಗೆ ತೆರಳಲು ಮಕ್ಕಳು ಸಜ್ಜಾಗಿದ್ದಾರೆ. ಈಗಾಗಲೇ ಶಾಲೆಯಲ್ಲಿ ಬಿಸಿಯೂಟಕ್ಕೆ ಅಗತ್ಯವಾದ ಬೇಳೆ, ತರಕಾರಿ, ಪಡಿತರ, ಮೊಟ್ಟೆ, ಕುಡಿಯುವ ನೀರು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಮೊದಲ ದಿನವೇ ಪಠ್ಯಪುಸ್ತಕ, ಸಮವಸ್ತ್ರ ವಿತರಿಸಲು ಕೂಡ ಸಿದ್ಧತೆ ಮಾಡಿಕೊಳ್ಳಲಾಗಿದೆ.
