HomeKarnatakaಸ್ಕೂಟಿ-ಬೈಕ್ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು

ಸ್ಕೂಟಿ-ಬೈಕ್ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು

ಬಾಗಲಕೋಟೆ: ಸ್ಕೂಟಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜ್ಜಿಲ್ಲೆಯ ಬನಹಟ್ಟಿಯ ಹೊರವಲಯದಲ್ಲಿ ನಡೆದಿದೆ.

ಸ್ಕೂಟಿ ಹಿಂಬದಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಸ್ಕೂಟಿ ಸವಾರ ಹಾರಿ ಬಿದ್ದಿದ್ದಾನೆ. ತಲೆ, ಮುಖದ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ.

22 ವರ್ಷದ ಯುವಕ ಮಲ್ಲಿಕಾರ್ಜುನ ಮೃತ ದುರ್ದೈವಿ. ಅಪಘತದಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಬನಹಟ್ಟಿ ಠಾಣೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular