HomeKarnatakaಸಚಿವ ಯು.ಟಿ. ಖಾದರ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ: ಸವಾರನಿಗೆ ಗಾಯ

ಸಚಿವ ಯು.ಟಿ. ಖಾದರ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ: ಸವಾರನಿಗೆ ಗಾಯ

ಕಾರವಾರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಸಮೀಪ ಶನಿವಾರ ಸಂಭವಿಸಿದೆ.

ಯು.ಟಿ. ಖಾದರ್ ಕಾರವಾರದಲ್ಲಿ ಸಭೆ ನಡೆಸಿ ಕಾರವಾರದಿಂದ ಉಡುಪಿ ಕಡೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತ ಸಂಭವಿಸಿದ ತಕ್ಷಣ ಸಚಿವ ಯು.ಟಿ. ಖಾದರ್ ಅವರು ಮಾನವೀಯತೆ ಮೆರೆದಿದ್ದು, ಗಾಯಾಳುವನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲು ಕ್ರಮ ಕೈಗೊಂಡಿದ್ದಾರೆ.

ದಾರಿಯಲ್ಲಿ ಬಂದ ಸ್ಕೂಟರ್‌ ನೇರವಾಗಿ ಡಿಕ್ಕಿಯಾಗುವುದನ್ನು ತಪ್ಪಿಸಲು ಬೆಂಗಾವಲು ವಾಹನದ ಚಾಲಕ ಅತ್ಯಂತ ಸಮಯಪ್ರಜ್ಞೆಯಿಂದ ವಾಹನವನ್ನು ನಿಯಂತ್ರಿಸಿ ಪಕ್ಕಕ್ಕೆ ಸರಿಸಿದ್ದಾನೆ. ಒಂದು ವೇಳೆ ಚಾಲಕ ವಾಹನವನ್ನು ನಿಯಂತ್ರಿಸದೇ ಇದ್ದಿದ್ದರೆ ಸ್ಕೂಟರ್ ಸವಾರನ ಜೀವಕ್ಕೆ ಕುತ್ತು ಬರುವ ಸಾಧ್ಯತೆಯಿತ್ತು. ಚಾಲಕನ ಸಮಯಪ್ರಜ್ಞೆಯಿಂದ ಸವಾರನ ಜೀವ ಉಳಿದಿದೆ. ಅಪಘಾತದಲ್ಲಿ ಅಂಕೋಲ ತಾಲೂಕಿನ ಅಲಗೇರಿ ಗ್ರಾಮದ ನಿವಾಸಿ ಸಂದೀಪ್ ನಾಯಕ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಅಂಕೋಲ ಪಟ್ಟಣದ ಆರ್ಯ ಮೆಡಿಕಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular