BIG NEWS: 15 ವರ್ಷ ಪೂರ್ಣಗೊಂಡ 5 ಸಾವಿರ ವಾಹನಗಳ ಗುಜರಿಗೆ ಹಾಕಲು ಸಾರಿಗೆ ಇಲಾಖೆ ಆದೇಶ

ಬೆಂಗಳೂರು: 5 ವರ್ಷ ಪೂರ್ಣಗೊಂಡ 5000 ಸರ್ಕಾರಿ ವಾಹನಗಳ ಗುಜರಿಗೆ ಹಾಕಲು ಸಾರಿಗೆ ಇಲಾಖೆ ಅನುಮೋದನೆ ನೀಡಿ ಆದೇಶಿಸಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳು, ನಿಗಮ, ಮಂಡಳಿ, ಸ್ಥಳೀಯ ಸಂಸ್ಥೆಗಳಲ್ಲಿನ 15,000 ವರ್ಷ ಪೂರ್ಣಗೊಂಡ 5000 ವಾಹನಗಳನ್ನು ನಾಶಪಡಿಸಲು ಸರ್ಕಾರದಿಂದ ಅನುಮತಿ ನೀಡಲಾಗಿದೆ.

ರಾಜ್ಯದಲ್ಲಿ ಹಳೆಯ ವಾಹನ ನಾಶಪಡಿಸಲು ನೋಂದಾಯಿತ ವಾಹನಗಳ ಸ್ಕ್ರಾಪಿಂಗ್ ಪಾಲಿಸಿ 2022ರ ಅಡಿಯಲ್ಲಿ 15 ವರ್ಷ ಪೂರ್ಣಗೊಂಡ ಸರ್ಕಾರಿ ಸ್ವಾಮ್ಯದ ವಾಹನಗಳನ್ನು ಆದ್ಯತೆ ಮತ್ತು ಉಪಯೋಗದ ಆಧಾರದ ಮೇಲೆ ಹಂತ ಹಂತವಾಗಿ ನಾಶಪಡಿಸಲು ಸಾರಿಗೆ ಇಲಾಖೆ ವತಿಯಿಂದ ಅನುಮೋದನೆ ನೀಡಿ ಆದೇಶಿಸಲಾಗಿದೆ. ಅತಿ ಹೆಚ್ಚು ವರ್ಷಗಳನ್ನು ಪೂರ್ಣಗೊಳಿಸಿದ ವಾಹನಗಳನ್ನು ಮೊದಲು ನಾಶ ಮಾಡಲು ಆದ್ಯತೆ ನೀಡಬೇಕು ಎಂದು ತಿಳಿಸಲಾಗಿದೆ.

ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ನಾಶಪಡಿಸಲು ಉದ್ದೇಶಿಸಿದ ವಾಹನದ ಮೇಲಿನ ಕೊನೆಯ ಒಂದು ವರ್ಷದಲ್ಲಿ ಸಾರಿಗೆ ಇಲಾಖೆಯ ಶಾಸನದ ಕ್ರಮದ ಅಡಿಯಲ್ಲಿ ದಾಖಲಾದ ಪ್ರಕರಣದ ದಂಡಗಳು ಮತ್ತು ಪೊಲೀಸ್ ಇಲಾಖೆಯ ಸಂಚಾರ ನಿಯಮ ಉಲ್ಲಂಘನೆ ಅಡಿ ದಾಖಲಾದ ಪ್ರಕರಣಗಳಿಗೆ ಸೀಮಿತಗೊಳಿಸಿ ದಂಡಗಳ ವಸೂಲಾತಿಯಿಂದ ವಿನಾಯಿತಿ ನೀಡಲಾಗಿದೆ. 15 ವರ್ಷ ಪೂರ್ಣಗೊಂಡ ಸರ್ಕಾರಿ ವಾಹನಗಳ ನಾಶಕ್ಕೆ ಅನುಮತಿ ನೀಡಿ ಆದೇಶಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read