SDA, FDA ಪರೀಕ್ಷಾ ಅಕ್ರಮ: ಆರ್.ಡಿ.ಪಾಟೀಲ್ ಜಾಮೀನು ಅರ್ಜಿ ವಜಾ

ಕಲಬುರ್ಗಿ: ಕೆಇಎ ನಡೆಸಿದ್ದ ಎಸ್ ಡಿಎ ಹಾಗೂ ಎಫ್ ಡಿಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಆರ್.ಡಿ.ಪಾಟೀಲ್ ಜಾಮೀನು ಅರ್ಜಿಯನ್ನು ಕಲಬುರ್ಗಿ ಕೋರ್ಟ್ ತಿರಸ್ಕರಿಸಿದೆ.

ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಆರ್.ಡಿ.ಪಾಟೀಲ್ ಸೇರಿ 10 ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕಲಬುರ್ಗಿ ಜಿಲ್ಲಾ ಪ್ರಧಾನ ವಿಶೇಷ ನ್ಯಾಯಾಲಯ, ಆರೋಪಿಗಳಿಗೆ ಜಾಮೀನು ನೀಡಲು ನಿರಾಕರಿಸಿದೆ.

ಆರ್.ಡಿ.ಪಾಟೀಲ್ ಸೇರಿದಂತೆ ಹತ್ತು ಜನರ ಜಾಮೀನು ಅರ್ಜಿಯನ್ನು ನ್ಯಾಯಾಧೀಶೆ ಎಸ್.ನಾಗಶ್ರೀ ತಿರಸ್ಕರಿಸಿ ಆದೇಶ ಹೊರಡಿಸಿದ್ದಾರೆ.

2023 ಅಕ್ಟೋಬರ್ ನಲ್ಲಿ ನಡೆದಿದ್ದ ಎಸ್ ಡಿಎ, ಎಫ್ ಡಿಎ ಪರೀಕ್ಷೆಯಲ್ಲಿ ಅಕ್ರಮ ನಡೆದಿತ್ತು. ಆರ್.ಡಿ.ಪಟೀಲ್ ಸೇರಿ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read