HomeKarnatakaಪಶು ವೈದ್ಯಾಧಿಕಾರಿಯಿಂದ ಲಂಚ ಪಡೆಯುತ್ತಿದ್ದ ಎಸ್‌ಡಿಎ ಲೋಕಾಯುಕ್ತ ಬಲೆಗೆ

ಪಶು ವೈದ್ಯಾಧಿಕಾರಿಯಿಂದ ಲಂಚ ಪಡೆಯುತ್ತಿದ್ದ ಎಸ್‌ಡಿಎ ಲೋಕಾಯುಕ್ತ ಬಲೆಗೆ

ಬೆಂಗಳೂರು: ಪಶು ವೈದ್ಯಾಧಿಕಾರಿಯೊಬ್ಬರ ಶೈಕ್ಷಣಿಕ ಪ್ರಮಾಣ ಪತ್ರಗಳ ಪರಿಶೀಲನಾ ವರದಿ ನೀಡಲು 10,000 ರೂ.ಗೆ ಬೇಡಿಕೆ ಇಟ್ಟು ಲಂಚ ಪಡೆಯುತ್ತಿದ್ದ ಎಸ್‌ಡಿಎ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಹೆಬ್ಬಾಳದ ಪಶು ವೈದ್ಯಕೀಯ ಆಯುಕ್ತರ ಕಚೇರಿಯಲ್ಲಿ ಕಾರ್ಯನಿರ್ವಹಿಸುವ ದ್ವಿತೀಯ ದರ್ಜೆ ಸಹಾಯಕನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಮುದಾಸಿರ್ ಅಹಮದ್ ಬಂಧಿತ ಆರೋಪಿ.

ವಿಜಯಪುರದ ಪಶು ನಿರೀಕ್ಷಕ ಮಲ್ಲಿಕಾರ್ಜುನ್ ಶಂಕರ ನಿಡೋಣಿಯವರು ಶೈಕ್ಷಣಿಕ ಪ್ರಮಾಣ ಪತ್ರಗಳ ಪರಿಶೀಲನಾ ವರದಿಗಾಗಿ ಅರ್ಜಿ ಸಲ್ಲಿಸಿದ್ದು, ಅಂತಿಮ ವರದಿ ನೀಡಲು ಮುದಾಸಿರ್ ಅಹಮದ್ 10 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಮಲ್ಲಿಕಾರ್ಜುನ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಲ್ಲಿಕಾರ್ಜುನ್ ಅವರಿಂದ ಮುದಾಸಿರ್ ಲಂಚ ಪಡೆದುಕೊಂಡ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಲೋಕಾಯುಕ್ತ ಎಸ್ಪಿ ವಂಶಿಕೃಷ್ಣ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular