HomeKarnatakaದ್ವಿತೀಯ ದರ್ಜೆ ಸಹಾಯಕರು, ‘ಸಿ’ ವೃಂದದ ನೇಮಕಾತಿ ಅಧಿಸೂಚನೆಗೆ ತಿದ್ದುಪಡಿ

ದ್ವಿತೀಯ ದರ್ಜೆ ಸಹಾಯಕರು, ‘ಸಿ’ ವೃಂದದ ನೇಮಕಾತಿ ಅಧಿಸೂಚನೆಗೆ ತಿದ್ದುಪಡಿ

ಚಿತ್ರದುರ್ಗ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ದ್ವಿತೀಯ ದರ್ಜೆ ಸಹಾಯಕರು ‘ಸಿ’ ವೃಂದದ ಹುದ್ದೆಗೆ ನೇಮಕಾತಿಗೆ ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಪ್ರಕಟಿಸಲಾದ ಅಧಿಸೂಚನೆಗೆ ತಿದ್ದುಪಡಿ ತರಲಾಗಿದ್ದು, ಪರೀಕ್ಷೆಯ ವಿಷಯಗಳಿಗೆ ಸಂಬಂಧಿಸಿದಂತೆ ಪರಿಷ್ಕರಣೆ ಮಾಡಲಾಗಿದೆ.

ಅಕ್ಟೋಬರ್ ನಲ್ಲಿ ಪ್ರಕಟಿಸಲಾದ ಅಧಿಸೂಚನೆಯಲ್ಲಿ ಸ್ಪರ್ದಾತ್ಮಕ ಪರೀಕ್ಷೆಗಳ ವಸ್ತುನಿಷ್ಠ ಬಹುಆಯ್ಕೆ ಮಾದರಿಯ ಪ್ರಶ್ನೆ ಪತ್ರಿಕೆ-1 ಸಾಮಾನ್ಯ ಕನ್ನಡ/ಸಾಮಾನ್ಯ ಇಂಗ್ಲಿಷ್/ಕಂಪ್ಯೂಟರ್ ಜ್ಞಾನ ಹಾಗೂ ಪ್ರಶ್ನೆ ಪತ್ರಿಕೆ-2 ಸಾಮಾನ್ಯ ಜ್ಞಾನ ಎಂದು ಪ್ರಕಟಿಸಲಾಗಿತ್ತು. ಈ ಪ್ರಕಟಣೆಗೆ ತಿದ್ದುಪಡಿ ಅಧಿಸೂಚನೆ ಹೊರಡಿಸಲಾಗಿದ್ದು, ಇದರನ್ವಯ ಸ್ಪರ್ಧಾತ್ಮಕ ಪರೀಕ್ಷೆಗಳ ವಸ್ತುನಿಷ್ಠ ಬಹುಆಯ್ಕೆ ಮಾದರಿಯ ಪ್ರಶ್ನೆ ಪತ್ರಿಕೆ-1 ಸಾಮಾನ್ಯ ಜ್ಞಾನ ಹಾಗೂ ಪ್ರಶ್ನೆ ಪತ್ರಿಕೆ-2 ಸಾಮಾನ್ಯ ಕನ್ನಡ/ಸಾಮಾನ್ಯ ಇಂಗ್ಲಿಷ್ /ಕಂಪ್ಯೂಟರ್ ಜ್ಞಾನ ಎಂದು ಪರಿಷ್ಕರಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈಗಾಗಲೇ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗೆ ಅರ್ಜಿ ಸಲ್ಲಿಸಿರುವ ಮಾಜಿ ಸೈನಿಕ ಅಭ್ಯರ್ಥಿಗಳು ಈ ಮಾಹಿತಿಯನ್ನು ಕರ್ನಾಟಕ ರಾಜ್ಯ ಪತ್ರ  ಜನವರಿ 13, 2023 ರ ಸಂಚಿಕೆ: 215 ಭಾಗ 5 ರಲ್ಲಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಚೇರಿಯ ದೂರವಾಣಿ ಸಂಖ್ಯೆ : 08182-220925 ಗೆ ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕರು ತಿಳಿಸಿರುತ್ತಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular