HomeKarnatakaತಹಸೀಲ್ದಾರ್ ಕಚೇರಿಯಲ್ಲಿ SDA ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್: ಕೊಲೆ ಬಗ್ಗೆ ಕುತೂಹಲ ಮೂಡಿಸಿದ ಅನಾಮಧೇಯ ಪತ್ರ

ತಹಸೀಲ್ದಾರ್ ಕಚೇರಿಯಲ್ಲಿ SDA ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್: ಕೊಲೆ ಬಗ್ಗೆ ಕುತೂಹಲ ಮೂಡಿಸಿದ ಅನಾಮಧೇಯ ಪತ್ರ

ಬೆಳಗಾವಿ: ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಯಡವಣ್ಣನವರ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.

ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾಮಧೇಯ ಪತ್ರವೊಂದು ಕುತೂಹಲ ಮೂಡಿಸಿದೆ. ರುದ್ರಣ್ಣ ಅವರನ್ನು ಕೊಲೆ ಮಾಡಲಾಗಿದ್ದು, ಕಚೇರಿಯ ವಾಹನ ಚಾಲಕನನ್ನು ವಿಚಾರಣೆಗೊಳಪಡಿಸಬೇಕು ಎನ್ನುವ ಮಾಹಿತಿ ಇರುವ ಅನಾಮಧೇಯ ಪತ್ರವೊಂದು ಪೊಲೀಸ್ ಠಾಣೆಗೆ ಬಂದಿದೆ ಎನ್ನಲಾಗಿದೆ.

ತಹಶೀಲ್ದಾರ್ ಕಚೇರಿಯ ವಾಹನ ಚಾಲಕ ಕೊಲೆಯ ಸೂತ್ರಧಾರನಾಗಿದ್ದಾನೆ. ಆತನ ವಿಚಾರಣೆ ಮಾಡಿದರೆ ಕೊಲೆ ರಹಸ್ಯ ಹೊರಗೆ ಬರುತ್ತದೆ. ಆತನ ಪತ್ನಿ ಅನೈತಿಕ ಸಂಬಂಧ ಇಟ್ಟುಕೊಂಡು ರುದ್ರಣ್ಣನ ದುಡ್ಡು ಹೊಡೆದಿದ್ದಾಳೆ. ಮೃತರಿಗೆ ನ್ಯಾಯ ದೊರೆಯಬೇಕು. ಪ್ರಕರಣವನ್ನು ಮುಚ್ಚಿ ಹಾಕಬಾರದು ಎಂದು ಬರೆಯಲಾದ ಪತ್ರವೊಂದು ಪೋಲಿಸ್ ಠಾಣೆಗೆ ಬಂದಿದೆ. ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular