ಉಡುಪಿ: ದ್ವೇಷ ಭಾಷಣ ಆರೋಪದಲ್ಲಿ ಎಸ್ ಡಿಪಿಐ ಮುಖಂಡ ರಿಯಾಜ್ ಕಡಂಬುಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ವಹಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಉಡುಪಿಯ ಬ್ರಹ್ಮಾವರದ ಬಳಿ ಕುಂಜಾಲು ಸಮೀಪ ದನದ ತಲೆ ಪತ್ತೆಯಾಗಿತ್ತು. ಇದು ವ್ಯವಸ್ಥಿತ ಷಡ್ಯಂತ್ರ ಎಂದು ರಿಯಾಜ್ ಕಡುಂಬು ಹೇಳಿಕೆ ನೀಡಿದ್ದರು. ಅಲ್ಲದೇ ಸಂಘ ಪರಿವಾರದ ವಿರುದ್ಧ ದ್ವೇಷ ಭಾಷಣ ಮಾಡಿದ್ದರು. ಅಭಿವೃದ್ಧಿ ಕೆಲಸಗಳು ಕುಂತಿತವಾಗಿರುವುದರಿಂದ ಜನರ ಗಮನ ಬೇರೆಡೆ ಸೆಳೆಯಲು ಸಂಘಪರಿವಾರದ ಕಾರ್ಯಕರ್ತರು ನಡೆಸಿರುವ ವ್ಯವಸ್ಥಿತ ಕೃತ್ಯವಿದು ಎಂದು ಕಿಡಿಕಾರಿದ್ದರು. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಜಾಮೀನು ನಿಯಮಗಳಿಗೆ ವಿರುದ್ಧವಾಗಿ ನಡೆದುಕೊಂಡ ಹಿನ್ನೆಲೆಯಲ್ಲಿ ಕೋರ್ಟ್ 14 ದಿನಗಳ ಕಾಲ ರಿಯಾಜ್ ಗೆ ನ್ಯಾಯಾಂಗ ಬಂಧನ ವಿಧಿಸಿದೆ.