HomeKarnatakaBig News: ಬಿಸಿಲಿಗೆ ಡ್ಯಾಂಗಳು ಖಾಲಿ, ಬೆಂಗಳೂರಿಗೆ ಕಾದಿದೆಯೇ ಸಂಕಷ್ಟ?

Big News: ಬಿಸಿಲಿಗೆ ಡ್ಯಾಂಗಳು ಖಾಲಿ, ಬೆಂಗಳೂರಿಗೆ ಕಾದಿದೆಯೇ ಸಂಕಷ್ಟ?

ಬೇಸಿಗೆ ಆರಂಭದಲ್ಲಿಯೇ ಕರ್ನಾಟಕದ ಡ್ಯಾಂಗಳ ನೀರಿನ ಮಟ್ಟದಲ್ಲಿ ಕುಸಿತ ಕಂಡು ಬಂದಿದೆ. ಕಳೆದ ವರ್ಷ ನೈಋತ್ಯ ಮುಂಗಾರು ಮಳೆ ಉತ್ತಮವಾಗಿ ಸುರಿದಿದ್ದರೂ ಸಹ ಈ ವರ್ಷ ಫೆಬ್ರವರಿ ಅಂತ್ಯದಲ್ಲಿಯೇ ಕಾವೇರಿ ಕೊಳ್ಳದ ಡ್ಯಾಂಗಳು ಸೇರಿ ರಾಜ್ಯಾದ್ಯಂತ ನೀರಿನ ಮಟ್ಟ ಕುಸಿತವಾಗುತ್ತಿದೆ.

2025ರ ಅಕ್ಟೋಬರ್‌ನಲ್ಲಿ ಸಂಪೂರ್ಣ ಭರ್ತಿಯಾಗಿದ್ದ ಡ್ಯಾಂಗಳಲ್ಲಿ ಈಗ ಶೇ 55ರಷ್ಟು ಮಾತ್ರ ನೀರಿನ ಸಂಗ್ರವಿದೆ. ಅತಿಯಾದ ಬಿಸಿಲಿನ ಕಾರಣಕ್ಕೆ ನೀರು ಬೇಗ ಖಾಲಿಯಾಗುತ್ತಿದೆ. ಮುಂದಿನ ಎರಡು ಮೂರು ತಿಂಗಳು ಭಾರೀ ಬಿಸಿಲು ಇರಲಿದ್ದು, ಬೇಸಿಗೆಯಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗುವ ಆತಂಕ ಎದುರಾಗಿದೆ.

ಕರ್ನಾಟಕದ ಡ್ಯಾಂಗಳ ಒಟ್ಟು ನೀರಿನ ಸಂಗ್ರಹ ಸಾಮರ್ಥ್ಯ 895.07 ಟಿಎಂಸಿ ಅಡಿಗಳು. ಸದ್ಯ 492.91 ಟಿಎಂಸಿ ಅಡಿ ನೀರಿನ ಸಂಗ್ರಹವಿದೆ. ಆದರೆ ಕಳೆದ ವರ್ಷ ಇದೇ ಸಮಯದಲ್ಲಿ 535.21 ಟಿಎಂಸಿ ಅಡಿ ನೀರಿನ ಸಂಗ್ರಹವಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ 12 ಪ್ರಮುಖ ಜಲಾಶಯಗಳಲ್ಲಿ ಕಳೆದ ವರ್ಷದ ಈ ದಿನಕ್ಕೆ ಹೋಲಿಕೆ ಮಾಡಿದರೆ ಈಗ ನೀರಿನ ಪ್ರಮಾಣ ಕಡಿಮೆ ಇದೆ. ಆದ್ದರಿಂದ ಇರುವ ನೀರನ್ನು ಮಿತವಾಗಿ, ಎಚ್ಚರಿಕೆಯಿಂದ ಬಳಕೆ ಮಾಡಬೇಕಾದ ಅಗತ್ಯವಿದೆ.

ಕಾವೇರಿ ಕೊಳ್ಳದ ಡ್ಯಾಂಗಳು: ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರದ (ಕೆಎಸ್‌ಎನ್‌ಡಿಎಂಸಿ) ಮಾಹಿತಿಯಂತೆ ಕಾವೇರಿ ಕೊಳ್ಳದ 4 ಪ್ರಮುಖ ಜಲಾಶಯಗಳಲ್ಲಿ ಶೇ 66ರಷ್ಟು ನೀರಿನ ಸಂಗ್ರಹವಿದೆ.

ಇವುಗಳಲ್ಲಿ ಹಾರಂಗಿ ಶೇ 39, ಹೇಮಾವತಿ ಶೇ 55, ಕಬಿನಿ ಶೇ 68 ಮತ್ತು ಕೆಆರ್‌ಎಸ್ ಜಲಾಶಯದಲ್ಲಿ ಶೇ 78ರಷ್ಟು ನೀರಿನ ಸಂಗ್ರಹವಿದೆ. ಕೆಆರ್‌ಎಸ್ ಬೆಂಗಳೂರು ನಗರದಲ್ಲಿ ಕುಡಿಯುವ ನೀರು ಒದಗಿಸುವ ಪ್ರಮುಖ ಡ್ಯಾಂ ಆಗಿದೆ.

ಕೆಆರ್‌ಎಸ್, ಕಬಿನಿ, ಹೇಮಾವತಿ ಮತ್ತು ಹಾರಂಗಿ ಸೇರಿ 114.57 ಟಿಎಂಸಿ ಅಡಿ ನೀರಿನ ಸಂಗ್ರಹವಿದೆ. ಇದರಲ್ಲಿ 75.86 ಟಿಎಂಸಿ ಅಡಿಯನ್ನು ಸದ್ಯ ಬಳಕೆ ಮಾಡಬಹುದು. ಆದರೆ ಕಳೆದ ವರ್ಷ ಇದೇ ಸಮಯದಲ್ಲಿ ಬಳಕೆ ಮಾಡಬಹುದಾದ ನೀರಿನ ಪ್ರಮಾಣ 77.82 ಟಿಎಂಸಿ ಅಡಿ ಇತ್ತು.

ತಜ್ಞರ ಪ್ರಕಾರ ಎಲ್ಲಾ ಡ್ಯಾಂಗಳು ಒಟ್ಟು ನೀರಿನ ಸಂಗ್ರಹ ಸಾಮರ್ಥ್ಯಕ್ಕೆ ಹೋಲಿಕೆ ಮಾಡಿದರೆ ಅರ್ಧಕ್ಕೆ ತಲುಪಿವೆ. ಆದ್ದರಿಂದ ಬೇಸಿಗೆಯನ್ನು ನೀರನ್ನು ಎಚ್ಚರಿಕೆಯಿಂದ ಬಳಕೆ ಮಾಡಬೇಕಿದೆ. ಕಳೆದ ವರ್ಷ ಉತ್ತಮ ಮಳೆಯಾಗಿದ್ದರೂ ಸಹ ಈ ವರ್ಷ ನೀರಿನ ಮಟ್ಟದಲ್ಲಿ ಭಾರೀ ಕುಸಿತವಾಗಿದ್ದು, ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ಜನವರಿ ತಿಂಗಳಿನಲ್ಲಿ ವಾಡಿಕೆಯಷ್ಟು ಮಳೆಯಾಗಿಲ್ಲ. ಆದ್ದರಿಂದ ಡ್ಯಾಂಗಳ ಒಳಹರಿವು ಕಡಿಮೆಯಾಗಿದೆ. ಜೊತೆಗೆ ಬಿಸಿಲಿನ ತೀವ್ರತೆ ಹೆಚ್ಚಳವಾಗುತ್ತಿದ್ದು, ನೀರಿನ ಪ್ರಮಾಣ ಕಡಿಮೆಯಾಗಲು ಪ್ರಮುಖ ಕಾರಣ ಎಂದು ಅಂದಾಜಿಸಲಾಗಿದೆ.

ಕೆಆರ್‌ಎಸ್ ಜಲಾಶಯದ ಸದ್ಯದ ಪರಿಸ್ಥಿತಿ ನೋಡಿದರೆ ಬೆಂಗಳೂರು ನಗರಕ್ಕೆ ನೀರಿನ ಸಮಸ್ಯೆ ಆಗುವ ಸಾಧ್ಯತೆ ಕಡಿಮೆ ಇದೆ. 49.45 ಟಿಎಂಸಿ ಅಡಿ ಒಟ್ಟು ನೀರಿನ ಸಂಗ್ರಹ ಸಾಮರ್ಥ್ಯದ ಡ್ಯಾಂನಲ್ಲಿ ಸದ್ಯ 38.64 ಟಿಎಂಸಿ ಅಡಿ ನೀರಿದೆ. ಇದು ಬೆಂಗಳೂರು ನಗರಕ್ಕೆ ನೀರು ಪೂರೈಕೆ ಮಾಡಲು ಸಾಕು ಎಂದು ಅಂದಾಜಿಸಲಾಗಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular