HomeKarnatakaಎಂ ಫಾರ್ಮಾ, ಫಾರ್ಮಾ ಡಿ ಕೋರ್ಸ್ ಪ್ರವೇಶಕ್ಕೆ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಎಂ ಫಾರ್ಮಾ, ಫಾರ್ಮಾ ಡಿ ಕೋರ್ಸ್ ಪ್ರವೇಶಕ್ಕೆ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಬೆಂಗಳೂರು: ಎಂ ಫಾರ್ಮಾ(M-Pharma), ಫಾರ್ಮಾ ಡಿ(Pharma-D) ಈ ಎರಡೂ ಕೋರ್ಸ್ ಗಳ ಪ್ರವೇಶ ಸಂಬಂಧದ ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(KEA) ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.

ಈ ಫಲಿತಾಂಶಕ್ಕೆ ಆಕ್ಷೇಪಣೆಗಳು ಇದ್ದಲ್ಲಿ ಫೆ.13ರಂದು ಬೆಳಿಗ್ಗೆ 11 ಗಂಟೆಯೊಳಗೆ ಸಲ್ಲಿಸಬೇಕು. ಅದರ ನಂತರ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ.

ಪಿಜಿ ವೈದ್ಯಕೀಯ ಕೋರ್ಸ್

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶ ಸಂಬಂಧ 3ನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಭಾಗವಹಿಸಲು ಇಚ್ಛಿಸುವ ಅರ್ಹರು, ತಮ್ಮ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಪುನಃ ಫೆ.16ರಿಂದ 17ರ ಬೆಳಿಗ್ಗೆ 11 ಗಂಟೆವರೆಗೆ ಅವಕಾಶ ನೀಡಲಾಗಿದೆ.

ಫೆ.17ರವರೆಗೆ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸದಂತೆ ಹೈಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಈ ತೀರ್ಮಾನ ಮಾಡಲಾಗಿದೆ. ಇದುವರೆಗೂ ಇಚ್ಛೆ/ಆಯ್ಕೆಗಳನ್ನು ದಾಖಲಿಸದೇ ಇರುವವರು ಇದರ ಪ್ರಯೋಜನ ಪಡೆಯಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular