HomeKarnatakaನಾಳೆಯಿಂದ ದ್ವಿತೀಯ PUC ಪರೀಕ್ಷೆ-2 ಆರಂಭ, ಕೇಂದ್ರಗಳ ಸುತ್ತ ನಿಷೇಧಾಜ್ಞೆ

ನಾಳೆಯಿಂದ ದ್ವಿತೀಯ PUC ಪರೀಕ್ಷೆ-2 ಆರಂಭ, ಕೇಂದ್ರಗಳ ಸುತ್ತ ನಿಷೇಧಾಜ್ಞೆ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ 2026 ರ ದ್ವಿತೀಯ ಪಿಯುಸಿ ಪರೀಕ್ಷೆ-2 ನ್ನು ಏಪ್ರಿಲ್, 30 ರಿಂದ ಮೇ, 13 ರವರೆಗೆ ಮಡಿಕೇರಿ, ಸೋಮವಾರಪೇಟೆ ಮತ್ತು ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು ಈ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅವ್ಯವಹಾರಗಳಿಲ್ಲದೆ ಸುಗಮವಾಗಿ ದ್ವಿತೀಯ ಪಿಯುಸಿ ಪರೀಕ್ಷೆ-2ನ್ನು ನಡೆಸುವ ಸಲುವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ರಡಿ ದತ್ತವಾದ ಅಧಿಕಾರದಂತೆ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಭಂದಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶಿಸಿದ್ದಾರೆ.


ಈ ಆದೇಶವು ಪರೀಕ್ಷಾ ದಿನಗಳಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಮಾತ್ರ ಚಾಲ್ತಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದ್ದಾರೆ.

ಬಿ.ವಿ.ಎ ಪದವಿ ಪ್ರವೇಶಾತಿಗೆ ಅರ್ಜಿ ಆಹ್ವಾನ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿತ್ರದುರ್ಗ : ಮೈಸೂರು ಸಿದ್ದಾರ್ಥನಗರ ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜು (ಕಾವಾ) ಸಂಸ್ಥೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಬ್ಯಾಚುಲರ್ ಆಫ್ ವಿಜ್ಯುಯಲ್ ಆಟ್ರ್ಸ್ (ಬಿವಿಎ) ತರಗತಿಗಳ ಪ್ರವೇಶಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮೇ 30 ಅರ್ಜಿ ಸಲ್ಲಿಸಲು ಕೊನೆಯ ದಿನ.

ಮೈಸೂರು ವಿಶ್ವವಿದ್ಯಾನಿಲಯಕ್ಕೆ ಶಾಶ್ವತವಾಗಿ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ದಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಬ್ಯಾಚುರಲ್ ಆಫ್ ವಿಜ್ಯುಯಲ್ ಆಟ್ರ್ಸ್ ( ನಾಲ್ಕು ವರ್ಷದ ಎಂಟು ಸೆಮಿಸ್ಟರ್‍ಗಳ ರಾಷ್ಟ್ರೀಯ ಶಿಕ್ಷಣ ಪದ್ದತಿ-ಸ್ಟೇಟ್ ಎಜುಕೇಷನ್ ಪಾಲಿಸಿ ಅನ್ವಯ ದೃಶ್ಯಕಲೆಯಲ್ಲಿ 2026-27ನೇ ಸಾಲಿಗೆ ಪ್ರಥಮ ವರ್ಷದ ಬಿವಿಎ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಹಾಗೂ ದ್ವಿತೀಯ ಪಿಯುಸಿಗೆ ಸಮಾನಾಂತರ ಕೋರ್ಸು ಮಾಡಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಈ ಪದವಿಯಲ್ಲಿ 3ನೇ ಸೆಮಿಸ್ಟರ್‍ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಚಿತ್ರ ಪತ್ರಿಕೋದ್ಯಮ ವಿಭಾಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.

ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಅಂತರ್ಜಾಲ ವಿಳಾಸ htts://uucms.karnataka.gov.in ಅಥವಾ https://www.cavamysore.karnataka.gov.in ಮೂಲಕವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಹತಾ ಪರೀಕ್ಷೆಯ ದಿನಾಂಕ ಮತ್ತು ಸಂದರ್ಶನದ ದಿನಾಂಕ ಮಾಹಿತಿಯನ್ನು ಪ್ರತ್ಯೇಕವಾಗಿ ತಿಳಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿಗೆ ಕಛೇರಿ ಸಮಯದಲ್ಲಿ 0821-2438931 ಯನ್ನು ಸಂಪರ್ಕಿಸಬಹುದು ಎಂದು ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular