ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ( II PUC Supplementary Exam) ಫಲಿತಾಂಶ (ಜೂನ್ 20) ಇಂದು ಪ್ರಕಟವಾಗಿದೆ.
ಪೂರಕ ಪರೀಕ್ಷೆ ಮುಗಿದ ನಂತರ ಮೌಲ್ಯಮಾಪನ ಕಾರ್ಯ ಪೂರ್ಣಗೊಳಿಸಿ ಫಲಿತಾಂಶ ಪ್ರಕಟಣೆಗೆ ಸಿದ್ಧತೆ ಮಾಡಿಕೊಂಡಿದ್ದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ಫಲಿತಾಂಶ ಪ್ರಕಟಿಸಿದೆ. ವಿದ್ಯಾರ್ಥಿಗಳು http://karresults.nic.in ವೆಬ್ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.
ಮೇ/ಜೂನ್ 2023ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ಮೇ 23 ರಿಂದ ಜೂನ್ 03 ರ ವರೆಗೆ ನಡೆಸಿದ್ದು, ಈ ಪರೀಕ್ಷೆಯ ಎಲ್ಲಾ ವಿಷಯಗಳ ಮೌಲ್ಯಮಾಪನ ಕಾರ್ಯ ಮುಕ್ತವಾಗಿದ್ದು, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಇಂದು ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಲು https://kseab.karnataka.gov.in/ ಅಥವಾ https://karresults.nic.in http://karresults.nic.in ವೆಬ್ ಸೈಟ್ ಲಿಂಕ್ ಕ್ಲಿಕ್ ಮಾಡಿ.
You Might Also Like
TAGGED:II puc supplementary exam