ಬೆಂಗಳೂರಿನ ಕ್ಯಾಲಸನಹಳ್ಳಿಯಲ್ಲಿ ʻನಿಮ್ಹಾನ್ಸ್ʼ ಎರಡನೇ ಘಟಕ ಸ್ಥಾಪನೆ : ಸಚಿವ ಡಾ. ಶರಣಪ್ರಕಾಶ ಪಾಟೀಲ್‌

ಬೆಂಗಳೂರು : ಬೆಂಗಳೂರಿನ ಕ್ಯಾಲಸನಹಳ್ಳಿಯಲ್ಲಿರುವ 40 ಎಕರೆ ಜಾಗದಲ್ಲಿ ಮಲ್ಟಿ ಸೂಪರ್‌ ಸ್ಪೆಷಾಲಿಟಿ ನಿಮ್ಹಾನ್ಸ್‌ ಆಸ್ಪತ್ರೆ ನಿರ್ಮಿಸಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್‌ ತಿಳಿಸಿದ್ದಾರೆ.

ವೈದ್ಯಕೀಯ ಶಿಕ್ಷಣ ಇಲಾಖೆ ವತಿಯಿಂದ ಬೈರತಿ ಬಳಿಯ ಕ್ಯಾಲಸನಹಳ್ಳಿಯಲ್ಲಿರುವ 40 ಎಕರೆ ಜಾಗದಲ್ಲಿ ಮಲ್ಟಿ ಸೂಪರ್‌ ಸ್ಪೆಷಾಲಿಟಿ ನಿಮ್ಹಾನ್ಸ್‌ ಆಸ್ಪತ್ರೆ ನಿರ್ಮಿಸಲಾಗುತ್ತಿದೆ. ರಸ್ತೆ ಅಪಘಾತದಿಂದ ನರ ಹಾಗೂ ಮೆದುಳು ಸಮಸ್ಯೆಯಿಂದ ಸಾವಿರಾರು ಜನರು ಸಾವಿಗೀಡಾಗುತ್ತಿದ್ದಾರೆ. ಮಾನಸಿಕ ಆರೋಗ್ಯ ಮತ್ತು ನರ ಸಮಸ್ಯೆಗಳಿಂದ ಜೀವ ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ಬೆಂಗಳೂರಿನಲ್ಲಿ ದೇಶದ ಅತ್ಯಂತ ಪ್ರತಿಷ್ಠಿತ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯಾಗಿರುವ ನಿಮ್ಹಾನ್ಸ್‌ನ ಎರಡನೇ ಘಟಕವನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read