HomeKarnatakaಪ್ರಧಾನಿ ಮೋದಿ ರೋಡ್ ಶೋ ವೇಳೆ ಭದ್ರತಾ ಲೋಪ ಆಗಿಲ್ಲ: ಸಮಗ್ರ ವಿಚಾರಣೆ ಬಳಿಕ ಮಾಹಿತಿ;...

ಪ್ರಧಾನಿ ಮೋದಿ ರೋಡ್ ಶೋ ವೇಳೆ ಭದ್ರತಾ ಲೋಪ ಆಗಿಲ್ಲ: ಸಮಗ್ರ ವಿಚಾರಣೆ ಬಳಿಕ ಮಾಹಿತಿ; ರಮಣ್ ಗುಪ್ತ

ಹುಬ್ಬಳ್ಳಿ: ಬಿಗಿ ಭದ್ರತೆ ನಡುವೆಯೂ ಪ್ರಧಾನಿ ಮೋದಿ ರೋಡ್ ಶೋ ವೇಳೆ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕನನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ಪೊಲೀಸರು ಕರೆತಂದಿದ್ದಾರೆ.

ಬಾಲಕನೊಂದಿಗೆ ಆತನ ತಾಯಿ ಮತ್ತು ಕುಟುಂಬಸ್ಥರು ಆಗಮಿಸಿದ್ದಾರೆ. ಘಟನೆಯ ಬಗ್ಗೆ ಬಾಲಕನಿಂದ ಹುಬ್ಬಳ್ಳಿಯ ಗೋಕುಲ ರಸ್ತೆ ಠಾಣೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೋದಿ ರೋಡ್ ಶೋ ವೇಳೆ ಬಾಲಕ ಹೂವಿನ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಭದ್ರತಾ ಲೋಪವಾಗಿಲ್ಲ. ಲಕ್ಷಾಂತರ ಜನರು ಸೇರಿದ್ದರು ಎಂದು ಕಮಿಷನರ್ ರಮಣ್ ಗುಪ್ತ ಹೇಳಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದ ಬಳಿ ಮಾತನಾಡಿದ ಅವರು, ಬ್ಯಾರಿಕೇಡ್ ದಾಟಿ ಬಂದ ಬಾಲಕನನ್ನು ಭದ್ರತಾ ಸಿಬ್ಬಂದಿ ತಡೆದಿದ್ದರು. ಅತ್ಯುತ್ಸಾಹದಿಂದ 10 ವರ್ಷದ ಬಾಲಕ ಈ ರೀತಿ ಮಾಡಿದ್ದಾನೆ ಅಷ್ಟೇ. ಮೋದಿಗೆ ಬಾಲಕ ಹಾರ ಹಾಕಿದ ಬಗ್ಗೆ ವಿಚಾರಣೆ ನಡೆಯುತ್ತಿದೆ. ನಮ್ಮಿಂದ ಯಾವುದೇ ಭದ್ರತಾ ಲೋಪವಾಗಿಲ್ಲ. ಪ್ರಕರಣದ ಬಗ್ಗೆ ಸಮಗ್ರ ವಿಚಾರಣೆಯ ನಂತರ ಪ್ರತಿಕ್ರಿಯೆ ನೀಡುತ್ತೇನೆ ಎಂದು ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಆಯುಕ್ತ ರಮಣ್ ಗುಪ್ತ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular