HomeIndiaಸೆಕ್ಯೂರಿಟಿ ಗಾರ್ಡ್ ನನ್ನೇ ಹತ್ಯೆಗೈದು ಪರಾರಿಯಾದ ದುಷ್ಕರ್ಮಿ

ಸೆಕ್ಯೂರಿಟಿ ಗಾರ್ಡ್ ನನ್ನೇ ಹತ್ಯೆಗೈದು ಪರಾರಿಯಾದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಆರಂಭವಾದ ವಾಗ್ವಾದ ಭದ್ರತಾ ಸಿಬ್ಬಂದಿಯ ಹತ್ಯೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ. ಸೆಕ್ಯೂರಿಟಿ ಗಾರ್ಡ್ ಬೈಕ್ ಗೆ ಮತ್ತೊಂದು ಬೈಕ್ ಟಚ್ ಆದ ಕಾರಣಕ್ಕೆ ಇಬ್ಬರ ನಡುವೆ ಆರಂಭವಾದ ಜಗಳ ಸೆಕ್ಯೂರಿಟಿ ಗಾರ್ಡ್ ನನ್ನೇ ಕೊಲ್ಲುವ ಹಂತಕ್ಕೆ ಹೋಗಿದೆ.

ದೆಹಲಿಯ ಕರೋಲ್ ಬಾಗ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮನೋಜ್ ಶರ್ಮಾ ಎಂಬಾತ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು. ಅವರ ಬೈಕ್ ಇನ್ನೋರ್ವರ ಬೈಕ್ ಗೆ ತಾಗಿತ್ತು. ಇದಕ್ಕೆ ಕೋಪಗೊಂಡ ವ್ಯಕ್ತಿ ಸೆಕ್ಯೂರಿಟಿ ಗಾರ್ಡ್ ನನ್ನು ಮನಬದಂತೆ ಬೈದಿದ್ದಾನೆ. ಇಬ್ಬರ ನಡುವೆ ವಾಗ್ವಾದ ವಿಪರೀತಕ್ಕೆ ತಲುಪಿದೆ.

ವ್ಯಕ್ತಿ ಸೆಕ್ಯೂರಿಟಿ ಗಾರ್ಡ್ ಮೇಲೆ ಚಾಕುವಿನಿಂದ ಇರಿದು ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ. ಭದ್ರತಾ ಸಿಬ್ಬಂದಿ ರಸ್ತೆ ಬದಿಯಲ್ಲೇ ಸಾವನ್ನಪ್ಪಿದ್ದಾರೆ.. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪತ್ತೆ ಮಾಡಿದ್ದು, ಬಂಧನಕ್ಕೆ ಸಿದ್ಧತೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular