HomeIndiaಬದುಕಲಿಲ್ಲ 250 ಅಡಿ ಆಳದ ಕೊಳವೆಬಾವಿಗೆ ಬಿದ್ದ 3 ವರ್ಷದ ಬಾಲಕಿ, 10 ಗಂಟೆಗಳ ರಕ್ಷಣಾ...

ಬದುಕಲಿಲ್ಲ 250 ಅಡಿ ಆಳದ ಕೊಳವೆಬಾವಿಗೆ ಬಿದ್ದ 3 ವರ್ಷದ ಬಾಲಕಿ, 10 ಗಂಟೆಗಳ ರಕ್ಷಣಾ ಕಾರ್ಯಾಚರಣೆ ನಂತರ ಸಾವು

ಹರಿಯಾಣದ ಫರಿದಾಬಾದ್‌ನ ಸೀಹಿ(Seehi) ಗ್ರಾಮದಲ್ಲಿ ಆಟವಾಡುತ್ತಿದ್ದಾಗ 250 ಅಡಿ ಆಳದ ಕೊಳವೆಬಾವಿಗೆ ಬಿದ್ದ ಮೂರು ವರ್ಷದ ಬಾಲಕಿ ಸುಮಾರು 10 ಗಂಟೆಗಳ ಕಾಲ ನಡೆದ ರಕ್ಷಣಾ ಕಾರ್ಯಾಚರಣೆಯ ನಂತರ ಮೃತಪಟ್ಟಿದ್ದಾಳೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ನೇಹಾ ಎಂದು ಗುರುತಿಸಲಾದ ಈ ಬಾಲಕಿ, ಭಾನುವಾರ ಸಂಜೆ ಕೊಳವೆಬಾವಿಯ ಬಳಿ ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ಅದರಲ್ಲಿ ಬಿದ್ದಿದ್ದಳು. ಸುಮಾರು 10 ಗಂಟೆಗಳ ಕಾಲ ನಡೆದ ರಕ್ಷಣಾ ಕಾರ್ಯಾಚರಣೆಯ ನಂತರ, ಸೋಮವಾರ ನಸುಕಿನ ಜಾವ 4 ಗಂಟೆ ಸುಮಾರಿಗೆ ಆಕೆಯನ್ನು ಹೊರತೆಗೆಯಲಾಯಿತು. ಆಕೆಯನ್ನು ಹೊರತೆಗೆದಾಗ ಆಕೆಯ ದೇಹದಲ್ಲಿ ಯಾವುದೇ ಚಲನವಲನವಿರಲಿಲ್ಲ. ಕೂಡಲೇ ಆಕೆಯನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಲ್ಲಿ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಘೋಷಿಸಿದರು.

ಮಗು ಕೊಳವೆಬಾವಿಗೆ ಬಿದ್ದಿದ್ದು ಹೇಗೆ?

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಘಟನೆಯು ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ಸೀಹಿ ಗ್ರಾಮದಲ್ಲಿ ಸಂಭವಿಸಿದೆ.

ಅಲ್ಲಿಯೇ ಸಮೀಪದಲ್ಲಿ ಟ್ರಾಕ್ಟರ್ ಒಂದನ್ನು ನಿಲ್ಲಿಸಲಾಗಿತ್ತು ಮತ್ತು ಮಕ್ಕಳು ಆಟವಾಡುತ್ತಾ ಅದರ ಮೇಲೆ ಹತ್ತಿದ್ದರು. ಈ ವೇಳೆ ನೇಹಾ ಕಾಲು ಜಾರಿ ಬಿದ್ದಿದ್ದಾಳೆ ಎಂದು ಹೇಳಲಾಗಿದೆ.

ಮಾಹಿತಿ ತಿಳಿದ ತಕ್ಷಣ, ಎನ್‌ಡಿಆರ್‌ಎಫ್(NDRF) ಮತ್ತು ಎಸ್‌ಡಿಆರ್‌ಎಫ್(SDRF) ತಂಡಗಳು ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದವು. ಕತ್ತಲೆಯಿಂದಾಗಿ ಕಾರ್ಯಾಚರಣೆಗೆ ಅಡಚಣೆಯಾದಾಗ, ಕೊಳವೆಬಾವಿಯ ಸುತ್ತಲೂ ದೀಪಗಳನ್ನು ಅಳವಡಿಸಲಾಯಿತು ಮತ್ತು ಪರಿಸ್ಥಿತಿಯನ್ನು ಗಮನಿಸಲು ಅದರೊಳಗೆ ಕ್ಯಾಮೆರಾವನ್ನು ಇಳಿಸಲಾಯಿತು. ಕಾರ್ಯಾಚರಣೆಯ ಸಮಯದಲ್ಲಿ, ಮಗು ಅಳುತ್ತಿರುವ ಶಬ್ದವೂ ಕೇಳಿಬಂದಿತ್ತು ಎಂದು ವರದಿಯಾಗಿದೆ.

ಬಾಲಕಿಯ ತಂದೆ ರಾಮ್‌ದಿನ್ ಅವರ ಪ್ರಕಾರ, ಈ ಕೊಳವೆಬಾವಿಯು ಫರಿದಾಬಾದ್ ಪುರಸಭೆಗೆ(Municipal Corporation) ಸೇರಿದ್ದು, ಸುಮಾರು 10 ವರ್ಷಗಳಿಂದ ಮುಚ್ಚಲ್ಪಟ್ಟಿತ್ತು. ಕೆಲ ದಿನಗಳ ಹಿಂದಷ್ಟೇ ಅದರ ಮುಚ್ಚಳವನ್ನು ತೆಗೆಯಲಾಗಿತ್ತು ಎಂದು ಅವರು ತಿಳಿಸಿದ್ದಾರೆ.

ಉತ್ತರ ಪ್ರದೇಶದ ಮೈನ್‌ ಪುರಿಯವರಾದ ರಾಮ್‌ ದಿನ್, ಈ ಗ್ರಾಮದಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ತಮ್ಮ ಮಗಳು ಕೊಳವೆಬಾವಿಗೆ ಬಿದ್ದಿರುವ ವಿಷಯವನ್ನು ಗ್ರಾಮಸ್ಥರು ತಿಳಿಸಿದಾಗ ಅವರು ಕೆಲಸದಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಗ್ರಾಹಕರಿಗೆ ಗುಡ್ ನ್ಯೂಸ್: ಇಂದಿನಿಂದ ಕೈಗೊಂಡಿದ್ದ ಬ್ಯಾಂಕ್ ನೌಕರರ 3 ದಿನದ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್ ಸಂಘಗಳು ಮತ್ತು ಒಕ್ಕೂಟಗಳ ನಡುವಿನ ಸಭೆಯ ನಂತರ ಮೂರು ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ.

ಸೆ. 28 ರಿಂದ 3 ದಿನ ಮಷ್ಕರ ಕೈಗೊಳ್ಳಲಾಗಿತ್ತು. ಇದಕ್ಕಾಗಿ ಗ್ರಾಹಕರಿಗೆ ತೊಂದರೆಯಾಗದಂತೆ ಸೆ.27ರಂದು ಭಾನುವಾರವೂ ಬ್ಯಾಂಕ್ ಗಳು ಕಾರ್ಯನಿರ್ವಹಿಸಿದ್ದವು. ಸಂಘಗಳು ಮತ್ತು ಒಕ್ಕೂಟಗಳ ನಡುವಿನ ಸಭೆಯ ನಂತರ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆ ಮಾಡಲಾಗಿದೆ.

ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ ​​(IBA) ಮತ್ತು ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ನಡುವೆ ಭಾನುವಾರ ರಾತ್ರಿ ನಡೆದ ಸಭೆಯ ನಂತರ ಮೂರು ದಿನಗಳ ಬ್ಯಾಂಕ್ ಮುಷ್ಕರವನ್ನು ಮುಂದೂಡಲಾಗಿದೆ. ಉಳಿದ ಶನಿವಾರಗಳನ್ನು ರಜಾದಿನಗಳೆಂದು ಘೋಷಿಸುವ ವಿಷಯದ ಕುರಿತು ಚರ್ಚಿಸಲು IBA ಮತ್ತು UFBUಯ ಉನ್ನತ ಮಟ್ಟದ ಸಮಿತಿಯನ್ನು ತಕ್ಷಣವೇ ರಚಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಈ ಸಮಿತಿಯು ಎಲ್ಲಾ ಸಂಭಾವ್ಯ ಪರ್ಯಾಯಗಳನ್ನು ಪರಿಶೀಲಿಸುತ್ತದೆ, ಎಲ್ಲಾ ಪಾಲುದಾರರೊಂದಿಗೆ ಚರ್ಚಿಸುತ್ತದೆ ಮತ್ತು ಎಲ್ಲರಿಗೂ ಹಾಗೂ ಮುಖ್ಯವಾಗಿ ಗ್ರಾಹಕರಿಗೆ ಸ್ವೀಕಾರಾರ್ಹವಾದ ಪರಿಹಾರವನ್ನು ರೂಪಿಸುತ್ತದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular