HomeUncategorizedಸಾಮಾಜಿಕ ಜಾಲತಾಣಗಳಲ್ಲಿ ಗಿಮಿಕ್ ಮಾಡೋರಿಗೆ ಕಮಿಷನರ್ ಖಡಕ್ ಎಚ್ಚರಿಕೆ

ಸಾಮಾಜಿಕ ಜಾಲತಾಣಗಳಲ್ಲಿ ಗಿಮಿಕ್ ಮಾಡೋರಿಗೆ ಕಮಿಷನರ್ ಖಡಕ್ ಎಚ್ಚರಿಕೆ

ಬೆಂಗಳೂರು: ಸೋಷಿಯಲ್ ಮೀಡಿಯಾಗಳಲ್ಲಿ ಗಿಮಿಕ್ ಮಾಡುವವರಿಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಸಿನಿಮಾ ಪ್ರಚಾರದ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಹುಚ್ಚಾಟ, ಗಿಮಿಕ್‌ ಗಳ ಬಗ್ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ, ಸಿನಿಮಾಗಳನ್ನು ಪ್ರಚಾರ ಮಾಡುವ ಸಲುವಾಗಿ ಕೆಲವು ವ್ಯಕ್ತಿಗಳು ಅಪಾಯಕಾರಿ ಕೃತ್ಯಗಳಲ್ಲಿ ತೊಡಗುತ್ತಿರುವ ಬಗ್ಗೆ ಪ್ರಸ್ತಾಪಿಸಿರುವ ಕಮಿಷ್ನರ್, ಸಿನಿಮಾ ಪ್ರಚಾರದ ಒಂದು ನಿದರ್ಶನದಲ್ಲಿ, ಪೆಟ್ರೋಲ್ ಕುಡಿಯುವಂತಹ ಹುಚ್ಚಾಟದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡಲಾಗಿತ್ತು. ನಂತರ ಆ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಬೇಕಾಗಿ ಬಂದಿತ್ತು. ಇಂತದ ಚೀಪ್ ಗಿಮಿಕ್​ಗಳು ಸಮಾಜಕ್ಕೆ ತಪ್ಪು ಸಂದೇಶ ರವಾನಿಸುತ್ತವೆ ಮತ್ತು ಇದು ಅಪಾಯಕಾರಿ ಘಟನೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾಮಾಜಿಕ ಮಾಧ್ಯಮಗಳನ್ನು ದುರ್ಬಳಕೆ ಮಾಡುವವರ ವಿರುದ್ಧ ಕಟ್ಟುನಿಟ್ಟಾದ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸೀಮಂತ್ ಕುಮಾರ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.

ಕಾನೂನಿನ ಚೌಕಟ್ಟಿನಿಂದ ಹೊರತಾದ ಯಾವುದೇ ಪ್ರಚಾರ ಕಾರ್ಯಗಳಿಗೆ ಅವಕಾಶವಿಲ್ಲ. ಕಾನೂನು ಉಲ್ಲಂಘಿಸುವವರು ಶಿಕ್ಷೆಗೆ ಒಳಗಾಗಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular