BREAKING: ನಟಿ ರಮ್ಯಾಗೆ ಅಶ್ಲೀಲ ಕಮೆಂಟ್ ಪ್ರಕರಣ: 13 ಜನರ ಮಾಹಿತಿ ಸಂಗ್ರಹಿಸಿದ CCB; ಇಬ್ಬರು ಅರೆಸ್ಟ್: ಕಮಿಷನರ್ ಮಾಹಿತಿ

ಬೆಂಗಳೂರು: ನಟಿ, ಸಂಸದೆ ರಮ್ಯಾ ಅವರುಗೆ ಅಶ್ಲೀಲ ಕಮೆಂಟ್ ವಿಚಾರವಾಗಿ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಮಿಷನರ್ ಸೀಮಂತ್ ಕುಮಾರ್ ಸಿಂಗ್, ಜಾಲತಾಣಗಳಲ್ಲಿ ನಟಿ ರಮ್ಯಾ ಬಗ್ಗೆ ಅಶ್ಲೀಲ ಕಮೆಂಟ್ ಮಾಡಿದ್ದ ಇಬ್ಬರನ್ನು ಬಂಧಿಸಲಾಗಿದೆ. ಸಿಸಿಬಿ ಪೊಲೀಸರು 13 ಜನರ ಮಾಹಿತಿ ಸಂಗ್ರಹಿಸಿದ್ದಾರೆ. ಅವರಲ್ಲಿ ಸದ್ಯ ಇಬ್ಬರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಬಂಧಿತರು ತಮ್ಮ ಜಾಲತಾಣಗಳ ಖಾತೆ ಮೂಲಕ ಕಮೆಂಟ್ ಕಳುಹಿಸುತ್ತಿದ್ದರು ಎಂದರು.

ಸಾಮಾಜಿಕ ಜಾಲತಾಣಗಳಲ್ಲಿ ಕಮೆಂಟ್ ಮಾಡುವವರ ಮೇಲೆ ನಿಗಾ ವಹಿಸಲಾಗುವುದು. ಅಸಭ್ಯ ಕಮೆಂಟ್ ಮಾಡಿದ್ರೆ ಕೇಸ್ ದಾಖಲಿಸಿ ಅರೆಸ್ಟ್ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read