HomeLatest NewsBREAKING: ಅಸಭ್ಯ ಕಮೆಂಟ್ ಮಾಡುವವರ ವಿರುದ್ಧ ಕೇಸ್ ದಾಖಲಿಸಿ ಅರೆಸ್ಟ್ ಮಾಡುತ್ತೇವೆ: ಕಮಿಷನರ್ ಸೀಮಂತ್ ಕುಮಾರ್...

BREAKING: ಅಸಭ್ಯ ಕಮೆಂಟ್ ಮಾಡುವವರ ವಿರುದ್ಧ ಕೇಸ್ ದಾಖಲಿಸಿ ಅರೆಸ್ಟ್ ಮಾಡುತ್ತೇವೆ: ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಎಚ್ಚರಿಕೆ!

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಅಸಭ್ಯ ಕಮೆಂಟ್ ಮಾಡುವವರ ವಿರುದ್ಧ ಕೇಸ್ ದಾಖಲಿಸಿ ಬಂಧಿಸುತ್ತೇವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸೀಮಂತ್ ಕುಮಾರ್ ಸಿಂಗ್, ಜಾಲತಾಣಗಳಲ್ಲಿ ನಟಿ ರಮ್ಯಾ ಬಗ್ಗೆ ಅಶ್ಲೀಲ ಕಮೆಂಟ್ ಮಾಡಿದ್ದ ಇಬ್ಬರನ್ನು ಬಂಧಿಸಲಾಗಿದೆ. ಸಿಸಿಬಿ ಪೊಲೀಸರು 13 ಜನರ ಮಾಹಿತಿ ಸಂಗ್ರಹಿಸಿದ್ದಾರೆ. ಅವರಲ್ಲಿ ಸದ್ಯ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತರು ತಮ್ಮ ಜಾಲತಾಣಗಳ ಖಾತೆ ಮೂಲಕ ಕಮೆಂಟ್ ಕಳುಹಿಸುತ್ತಿದ್ದರು ಎಂದರು.

ಸಾಮಾಜಿಕ ಜಾಲತಾಣಗಳಲ್ಲಿ ಕಮೆಂಟ್ ಮಾಡುವವರ ಮೇಲೆ ನಿಗಾ ವಹಿಸಲಾಗುವುದು. ಅಸಭ್ಯ ಕಮೆಂಟ್ ಮಾಡಿದ್ರೆ ಕೇಸ್ ದಾಖಲಿಸಿ ಅರೆಸ್ಟ್ ಮಾಡುತ್ತೇವೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular