HomeKarnatakaಚುನಾವಣಾ ದಿನಾಂಕ ಘೋಷಣೆಯಾದಾಗಿನಿಂದ 170 ಕೋಟಿ ರೂ. ವಶ

ಚುನಾವಣಾ ದಿನಾಂಕ ಘೋಷಣೆಯಾದಾಗಿನಿಂದ 170 ಕೋಟಿ ರೂ. ವಶ

ಮಾರ್ಚ್ 29 ರಂದು ಮಾದರಿ ನೀತಿ ಸಂಹಿತೆ(ಎಂಸಿಸಿ) ಜಾರಿಗೆ ಬಂದ ನಂತರ ಜಾರಿ ಸಂಸ್ಥೆಗಳು ಕರ್ನಾಟಕದಲ್ಲಿ ಒಟ್ಟು 170 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಂಡಿವೆ ಎಂದು ಚುನಾವಣಾ ಆಯೋಗ ಭಾನುವಾರ ತಿಳಿಸಿದೆ.

ಒಟ್ಟು 170.27 ಕೋಟಿ ರೂಪಾಯಿ ಜಪ್ತಿಯಲ್ಲಿ 71 ಕೋಟಿ ರೂಪಾಯಿ ನಗದು, 38 ಕೋಟಿ ರೂಪಾಯಿ ಮೌಲ್ಯದ ಮದ್ಯ, 29 ಕೋಟಿ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ, 19 ಕೋಟಿ ರೂಪಾಯಿ ಮೌಲ್ಯದ ಉಚಿತ ವಸ್ತುಗಳು ಮತ್ತು 13 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಸೇರಿದೆ ಎಂದು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇವುಗಳಿಗೆ ಸಂಬಂಧಿಸಿದಂತೆ 1,410 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಮೇ 10 ರ ವಿಧಾನಸಭಾ ಚುನಾವಣೆಯ ಘೋಷಣೆಗೂ ಮುನ್ನ ಮಾರ್ಚ್ 9 ರಿಂದ ಮಾರ್ಚ್ 27 ರ ನಡುವೆ ಸುಮಾರು 58 ಕೋಟಿ ರೂ. ಮೌಲ್ಯದ ನಗದು, ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular