HomeLatest NewsBIG NEWS : ರಾಜ್ಯದಲ್ಲಿ ಏ. 1 ರಿಂದ 'ಸ್ವಯಂ-ಗಣತಿ' ಆರಂಭ ; ಮನೆಯಲ್ಲೇ ಕುಳಿತು...

BIG NEWS : ರಾಜ್ಯದಲ್ಲಿ ಏ. 1 ರಿಂದ ‘ಸ್ವಯಂ-ಗಣತಿ’ ಆರಂಭ ; ಮನೆಯಲ್ಲೇ ಕುಳಿತು ಜಸ್ಟ್ ಈ ರೀತಿ ಮಾಹಿತಿ ಸಲ್ಲಿಸಿ.!

ಜನಗಣತಿ-2027 ರ ಅಂಗವಾಗಿ ಸಾರ್ವಜನಿಕರು ಸುರಕ್ಷಿತ ವೆಬ್ ಪೋರ್ಟಲ್ ಮೂಲಕ ಸ್ವಯಂ- ಗಣತಿಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದ್ದು ಜಿಲ್ಲೆಯ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು ಜನಗಣತಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ .ಜಗದೀಶ್ ಅವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಮನೆ ಪಟ್ಟಿ ಮತ್ತು ಮನೆಗಣತಿ ಕಾರ್ಯವು ಏಪ್ರಿಲ್ 16 ರಿಂದ ಆರಂಭವಾಗಲಿದ್ದು, ಇದಕ್ಕೂ ಮುನ್ನ 15 ದಿನಗಳ ಮುಂಚಿತವಾಗಿ ಅಂದರೆ ದಿನಾಂಕ: 01.04.2026 ರಿಂದ 15.04.2026 ವರೆಗೆ ಸ್ವಯಂ ಗಣತಿ ಕಾರ್ಯ ನಡೆಯಲಿದೆ.

ಸಾರ್ವಜನಿಕರು ಸ್ವಯಂ ಗಣತಿ ವೆಬ್ ಪೋರ್ಟಲ್ ಆದ se.census.gov.in ಬಳಸಿಕೊಂಡು ತಮ್ಮ ಕುಟುಂಬದ ಸಾಮಾನ್ಯ ಮಾಹಿತಿಯನ್ನು ಆನ್ಲೈನ್ ಮೂಲಕ ಭರ್ತಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ದಿನಾಂಕ 01.04.2026 ರಿಂದ 15.04.2026 ವರೆಗೆ ಸ್ವಯಂ ಗಣತಿ ವೆಬ್ ಪೋರ್ಟಲ್ ಲಭ್ಯವಿದ್ದು ಮೊಬೈಲ್, ಡೆಸ್ಕ್ ಟಾಪ್, ಲ್ಯಾಪ್ ಟಾಪ್ ಸಾಧನಗಳ ಮೂಲಕ ನಮೂದಿಸಬಹುದು. ಇದರಿಂದ ಸಮಯದ ಉಳಿತಾಯ ಜೊತೆಗೆ ನಿಖರ ಹಾಗೂ ಸಮಗ್ರ ಮಾಹಿತಿಯನ್ನು ಸಂಗ್ರಹಿಸಲು ಸಹಕಾರಿ ಆಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾಹಿತಿ ಭರ್ತಿಯ ವೇಳೆ, ಕುಟುಂಬಗಳು ತಮ್ಮ ಸ್ಥಳದ ವಿವರಗಳನ್ನು (ರಾಜ್ಯ, ಜಿಲ್ಲೆ, ತಾಲ್ಲೂಕು, ಗ್ರಾಮ/ಪಟ್ಟಣ/ನಗರ ಇತ್ಯಾದಿ) ಕಡ್ಡಾಯವಾಗಿ ನಮೂದಿಸಬೇಕು. ಸ್ಥಳವನ್ನು ನಿಖರವಾಗಿ ಗುರುತಿಸಲು ಪಿನ್ ಕೋಡ್ ಮತ್ತು ಡಿಜಿಟಲ್ ಮ್ಯಾಪ್ ಮೂಲಕ ಮನೆಯ ಸ್ಥಳವನ್ನು ಗುರುತಿಸುವ ವ್ಯವಸ್ಥೆಯೂ ಇರುತ್ತದೆ.

ಸ್ವಯಂ-ಗಣತಿ (Self-Enumeration) ಪೋರ್ಟಲ್ನಲ್ಲಿ ಕೇಳಿರುವ ಕೇಳುವ ಪ್ರಶ್ನೆಗಳಿಗೆ ಮನೆಪಟ್ಟಿ ಕಾರ್ಯಾಚರಣೆ ಮೊಬೈಲ್ ಆಪ್ನಲ್ಲಿರುವಂತೆಯೇ ರೂಪಿಸಲಾಗಿದ್ದು, ಕೆಲವು ಮಾಹಿತಿಗಳು ಪೂರ್ವಭರ್ತಿಯಾಗಿರಬಹುದು. ಸಾರ್ವಜನಿಕರಿಗೆ ಸಹಾಯವಾಗುವಂತೆ ಪದೇ ಪದೇ ಕೇಳುವ ಪ್ರಶ್ನೆಗಳು (FAQs) ಮತ್ತು ಮಾರ್ಗಸೂಚಿಗಳನ್ನೂ ಒದಗಿಸಲಾಗುತ್ತದೆ.

ಕುಟುಂಬವು ತಮ್ಮ ಮಾಹಿತಿಯನ್ನು ಯಶಸ್ವಿಯಾಗಿ ಸಲ್ಲಿಸಿದ ನಂತರ, ಅವರಿಗೆ ಒಂದು ವಿಶಿಷ್ಟ ಸ್ವಯಂ-ಗಣತಿ ಐಡಿ (Self-Enumeration ID) ನೀಡಲಾಗುತ್ತದೆ. ಈ ಐಡಿಯನ್ನು SMS ಮತ್ತು ಇಮೇಲ್ ಮೂಲಕ ಕಳುಹಿಸಲಾಗುತ್ತದೆ. ಅದನ್ನು ಮನೆಗೆ ಭೇಟಿ ನೀಡುವ ಗಣತಿದಾರರಿಗೆ (Enumerator) ಈ ಐಡಿಯನ್ನು ಸಾರ್ವಜನಿಕರು ಹಂಚಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆನ್‌ಲೈನ್‌ನಲ್ಲಿ ಮಾಹಿತಿ ನಮೂದಿಸುವ ಹಂತಗಳು

  1. ವೆಬ್‌ಸೈಟ್: ಅಧಿಕೃತ ವೆಬ್‌ಸೈಟ್ https://se.census.gov.in ಗೆ ಭೇಟಿ ನೀಡಿ.
  2. ಲಾಗಿನ್: ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಮತ್ತು ಬರುವ OTP ಮೂಲಕ ಲಾಗಿನ್ ಆಗಿ.
  3. ಮಾಹಿತಿ ಭರ್ತಿ: ಮನೆಯ ಮುಖ್ಯಸ್ಥರ ಹೆಸರು, ಸದಸ್ಯರ ವಿವರ, ಮನೆಯ ಸೌಲಭ್ಯಗಳು (ವಿದ್ಯುತ್, ನೀರು, ಶೌಚಾಲಯ ಇತ್ಯಾದಿ) ಸೇರಿದಂತೆ ಕೇಳಲಾದ ಪ್ರಶ್ನೆಗಳಿಗೆ ಉತ್ತರ ನೀಡಿ.
  4. ಸಲ್ಲಿಕೆ: ಮಾಹಿತಿ ಭರ್ತಿ ಮಾಡಿದ ನಂತರ ಸಬ್‌ಮಿಟ್ ಬಟನ್ ಒತ್ತಿ.
  5. ID ಪಡೆಯಿರಿ: ಯಶಸ್ವಿಯಾಗಿ ಸಲ್ಲಿಕೆಯಾದ ನಂತರ ನಿಮ್ಮ ಮೊಬೈಲ್‌ಗೆ ‘ಸ್ವಯಂ-ಗಣತಿ ಗುರುತಿನ ಸಂಖ್ಯೆ’ (Self-Enumeration ID) ಬರುತ್ತದೆ. ಇದನ್ನು ಜೋಪಾನವಾಗಿ ಇಟ್ಟುಕೊಳ್ಳಿ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular