ʻಸ್ವಾವಲಂಬಿ ಸಾರಥಿʼ ಯೋಜನೆ : ʻಸರಕು ವಾಹನ, ಟ್ಯಾಕ್ಸಿʼ ಖರೀದಿಗೆ ಅರ್ಜಿ ಸಲ್ಲಿಸಲು ಡಿ. 15 ಕೊನೆಯ ದಿನ

ಬೆಂಗಳೂರು : ಸ್ವಾವಲಂಬಿ ಸಾರಥಿ ಯೋಜನೆಯಡಿ ಸರಕು ವಾಹನ ಅಥವಾ ಟ್ಯಾಕ್ಸಿ (ಹಳದಿ ಬೋರ್ಡ್) ಖರೀದಿಗೆ ಸಹಾಯಧನ ಹಾಗೂ ಸಾಲ ಸೌಲಭ್ಯವನ್ನು ಸೇವಾ ಸಿಂಧು ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಡಿಸೆಂಬರ್‌ 15 ಕೊನೆಯ ದಿನವಾಗಿದೆ.

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಸ್ವಾವಲಂಬಿ ಸಾರಥಿ ಯೋಜನೆಗಳಡಿ ಸಾಲ ಸೌಲಭ್ಯ ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸರಕು ವಾಹನ/ಟ್ಯಾಕ್ಸಿ (ಹಳದಿ ಬೋರ್ಡ್) ಖರೀದಿಸುವ ಉದ್ದೇಶಕ್ಕೆ. ಘಟಕ ವೆಚ್ಚದ ಶೇ.75ರಷ್ಟು ಸಹಾಯಧನ ಅಥವಾ ಗರಿಷ್ಟ ರೂ.4 ಲಕ್ಷ. ಮೈಕ್ರೋ ಕ್ರೆಡಿಟ್ ಯೋಜನೆ (ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘಗಳು): ಮಹಿಳೆಯರಲ್ಲಿ ಗುಂಪು ಆರ್ಥಿಕ ಚಟುವಟಿಕೆಗೆ ಉತ್ತೇಜನ ನೀಡಿ ಆದಾಯ ಗಳಿಸಲು ಅನುಕೂಲವಾಗುವಂತೆ ಕನಿಷ್ಟ 10 ಸದಸ್ಯರಿರುವ ಮಹಿಳಾ ಸ್ವಸಹಾಯ ಸಂಘಗಳಿಗೆ ರೂ.2.50 ಲಕ್ಷಗಳನ್ನು ಮಂಜೂರು ಮಾಡಲಾಗುವುದು. ಇದರಲ್ಲಿ ರೂ.1.50 ಲಕ್ಷ ಸಹಾಯಧನ ಮತ್ತು ರೂ.1 ಲಕ್ಷ ಸಾಲ(ಶೇಕಡ 4ರಷ್ಟು ಬಡ್ಡಿ ದರ).

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read