HomeLatest NewsSHOCKING NEWS: ಸೆಲ್ಫಿ ತೆಗೆಯುತ್ತಿದ್ದಾಗ ದುರಂತ: ಪತ್ನಿ ಕಣ್ಮುಂದೆಯೇ ಪ್ರಪಾತಕ್ಕೆ ಬಿದ್ದು ಶಿಕ್ಷಕ ಸಾವು!

SHOCKING NEWS: ಸೆಲ್ಫಿ ತೆಗೆಯುತ್ತಿದ್ದಾಗ ದುರಂತ: ಪತ್ನಿ ಕಣ್ಮುಂದೆಯೇ ಪ್ರಪಾತಕ್ಕೆ ಬಿದ್ದು ಶಿಕ್ಷಕ ಸಾವು!

ಚಿಕ್ಕಮಗಳೂರು: ಪತ್ನಿ ಜೊತೆ ಪ್ರವಾಸಕ್ಕೆ ಹೋಗಿದ್ದ ಶಿಕ್ಷಕ ಸೆಲ್ಫಿ ತೆಗೆಯಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರಿನ ಕೆಮ್ಮಣ್ಣುಗುಂಡಿಯಲ್ಲಿ ಈ ದುರಂತ ಸಂಭವಿಸಿದೆ. ಸಂತೋಷ್ (40) ಮೃತ ಶಿಕ್ಷಕ. ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿಗೆ ಶಿಕ್ಷಕ ಸಂತೋಷ್ ಪತ್ನಿ ಜೊತೆ ಹೋಗಿದ್ದರು. ಈ ವೇಳೆ ರಸ್ತೆಬದಿ ಪತ್ನಿಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗಿದ್ದಾರೆ. ಆಯತಪ್ಪಿ 60 ಅಡಿ ಆಳದ ಪ್ರಪಾತಕ್ಕೆ ಬಿದ್ದಿದ್ದು, ಬಿದ್ದ ರಭಸಕ್ಕೆ ಸಂತೋಷ್ ತಲೆಗೆ ಗಂಭೀರವಾದ ಪೆಟ್ಟು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತ ಸಂತೋಷ್ ತರೀಕೆರೆ ತಾಲೂಕಿನ ಲಕ್ಷ್ಮೀಸಾಗರ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಮೃತದೇಹವನ್ನು ಮೇಲಕೆತ್ತಿದ್ದಾರೆ. ಲಿಂಗದಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular