ಸಮೀಕ್ಷೆಯಲ್ಲಿ 60 ಪ್ರಶ್ನೆ ಏಕೆ ಇವೆ ಎಂದು ಪ್ರಶ್ನಿಸುವವರು ಸ್ವಾರ್ಥ ರಾಜಕಾರಣಿಗಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಮೀಕ್ಷೆ ವಿರೋಧಿಸುವ ರಾಜಕಾರಣಿಗಳು ತಮ್ಮ ಸ್ವಾರ್ಥಕ್ಕಾಗಿ ಸಮೀಕ್ಷೆಯಲ್ಲಿ 60 ಪ್ರಶ್ನೆಯಿದೆ ಎನ್ನುತ್ತಾರೆ, ಆದರೆ ಈ ಎಲ್ಲಾ ಪ್ರಶ್ನೆಯಲ್ಲಿ ಏನೇನಿದೆ ಎನ್ನುವುದನ್ನು ಹೇಳುತ್ತಾರೆಯೇ? ಸಮೀಕ್ಷೆಯ ಪ್ರಶ್ನಾವಳಿಯಲ್ಲಿ ಸಾಮಾಜಿಕ ಸೂಚಕಗಳು ಇರುತ್ತವೆ. ಕೇಂದ್ರ ಸರ್ಕಾರದಿಂದಾಗುವ ಸರ್ವೆ, ನೀತಿ ಆಯೋಗದ ಸರ್ವೆ, ಜನಸಂಖ್ಯೆ ಸರ್ವೆ ಇವೆಲ್ಲದರಲ್ಲೂ ಇದೇ ರೀತಿಯ ಪ್ರಶ್ನೆಗಳಿವೆ. ಆಯಾಯ ಭೌಗೋಳಿಕ ಪ್ರದೇಶದಲ್ಲಿರುವ ಸಮಸ್ಯೆಗಳ ಕುರಿತಾದ ಪ್ರಶ್ನೆಗಳು ಇರುತ್ತವೆ. ಇದರಿಂದ ಜನರ ಸಮಸ್ಯೆಗಳನ್ನು ತಿಳಿದುಕೊಂಡು ರಾಜ್ಯ ಸರ್ಕಾರಕ್ಕೆ ಯೋಜನೆಗಳನ್ನು ರೂಪಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದ್ದಾರೆ.
ಸಮೀಕ್ಷೆಯಲ್ಲಿ ತಪ್ಪದೇ ಭಾಗವಹಿಸಿ
ರಾಜ್ಯದ ಎಲ್ಲಾ ಜಾತಿ ಧರ್ಮದವರ ಸಾಮಾಜಿಕ,ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಗಳನ್ನು ಅರಿಯಲು ಸಮೀಕ್ಷೆ ನಡೆಸುತ್ತಿದ್ದೇವೆ. ಈ ವೇಳೆ ಸಂಗ್ರಹಿಸಿದ ಮಾಹಿತಿಯಿಂದ ರಾಜ್ಯ ಸರ್ಕಾರಕ್ಕೆ ಬಜೆಟ್ ಮಂಡಿಸಲು, ನೂತನ ಯೋಜನೆಗಳನ್ನು ಜಾರಿಗೊಳಿಸಲು, ಸಮಾಜದ ವ್ಯವಸ್ಥೆಯನ್ನು ಬದಲಾವಣೆ ಮಾಡಲು ಅನುಕೂಲವಾಗಲಿದೆ. ಸಮೀಕ್ಷೆಯ ಬಗ್ಗೆ ಅಪಪ್ರಚಾರ ಮಾಡುತ್ತಿರುವವರ ಮಾತಿಗೆ ಬೆಲೆಕೊಡದೆ ಪ್ರತಿಯೊಬ್ಬರು ಸಮೀಕ್ಷೆಯಲ್ಲಿ ಭಾಗವಹಿಸಿ. ರಾಜ್ಯದ ಅಭಿವೃದ್ಧಿಯಲ್ಲಿ ನಮ್ಮೊಂದಿಗೆ ಕೈಜೋಡಿಸಿ ಎಂದು ಸಿಎಂ ತಿಳಿಸಿದ್ದಾರೆ.
ಸಮೀಕ್ಷೆಯಲ್ಲಿ 60 ಪ್ರಶ್ನೆಗಳನ್ನು ಇಟ್ಟಿರುವುದು ಯಾಕೆ?
— Siddaramaiah (@siddaramaiah) October 17, 2025
“ಸಮೀಕ್ಷೆ ವಿರೋಧಿಸುವ ರಾಜಕಾರಣಿಗಳು ತಮ್ಮ ಸ್ವಾರ್ಥಕ್ಕಾಗಿ ಸಮೀಕ್ಷೆಯಲ್ಲಿ 60 ಪ್ರಶ್ನೆಯಿದೆ ಎನ್ನುತ್ತಾರೆ, ಆದರೆ ಈ ಎಲ್ಲಾ ಪ್ರಶ್ನೆಯಲ್ಲಿ ಏನೇನಿದೆ ಎನ್ನುವುದನ್ನು ಹೇಳುತ್ತಾರೆಯೇ? ಸಮೀಕ್ಷೆಯ ಪ್ರಶ್ನಾವಳಿಯಲ್ಲಿ ಸಾಮಾಜಿಕ ಸೂಚಕಗಳು ಇರುತ್ತವೆ. ಕೇಂದ್ರ ಸರ್ಕಾರದಿಂದಾಗುವ… pic.twitter.com/hDRu0MbhDJ
ಸಮೀಕ್ಷೆಯಲ್ಲಿ ತಪ್ಪದೇ ಭಾಗವಹಿಸಿ
— Siddaramaiah (@siddaramaiah) October 17, 2025
“ರಾಜ್ಯದ ಎಲ್ಲಾ ಜಾತಿ ಧರ್ಮದವರ ಸಾಮಾಜಿಕ,ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಗಳನ್ನು ಅರಿಯಲು ಸಮೀಕ್ಷೆ ನಡೆಸುತ್ತಿದ್ದೇವೆ. ಈ ವೇಳೆ ಸಂಗ್ರಹಿಸಿದ ಮಾಹಿತಿಯಿಂದ ರಾಜ್ಯ ಸರ್ಕಾರಕ್ಕೆ ಬಜೆಟ್ ಮಂಡಿಸಲು, ನೂತನ ಯೋಜನೆಗಳನ್ನು ಜಾರಿಗೊಳಿಸಲು, ಸಮಾಜದ ವ್ಯವಸ್ಥೆಯನ್ನು ಬದಲಾವಣೆ ಮಾಡಲು ಅನುಕೂಲವಾಗಲಿದೆ.… pic.twitter.com/3WLDq9y9EU