‘ಬೆಂಗಳೂರು : ಓಯೋ ರೂಮ್ ಗೆ ಹೋಗಲು ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಹೆಬ್ಬಗೋಡಿಯಲ್ಲಿ ಗುರುದತ್ತ ಸೈಬರ್ ಸೆಂಟರ್ ಹೆಸರಿನಲ್ಲಿ ದಂಧೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಯಶವಂತ್ ಹಾಗೂ ರಘುವೀರ್ ಎಂದು ಗುರುತಿಸಲಾಗಿದೆ. ಆರೋಪಿಗಳು ಹೆಬ್ಬಗೋಡಿಯಲ್ಲಿ ಗುರುದತ್ತ ಸೈಬರ್ ಸೆಂಟರ್ ನಡೆಸುತ್ತಿದ್ದರು. ಇವರು ನಕಲಿ ದಾಖಲೆ, ಆಧಾರ್ ಕಾರ್ಡ್ ಸೃಷ್ಟಿಸಿ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಒಂದು ನಕಲಿ ಎಸ್ ಎಸ್ ಎಲ್ ಸಿ ಮಾರ್ಕ್ಸ್ ಕಾರ್ಡ್ ಗೆ 5000 ರಿಂದ 30,000 ರೂ ಫಿಕ್ಸ್ ಮಾಡಲಾಗಿತ್ತು. ಹಾಗೂ ನಕಲಿ ಆಧಾರ್ ಕಾರ್ಡ್ ಗೆ 2000 ರೂ ಯಿಂದ 10,000 ಫಿಕ್ಸ್ ಮಾಡಲಾಗಿತ್ತು. ದಾಳಿ ನಡೆಸಿದ ಪೊಲೀಸರು ಆರೋಪಿಗಳಿಂದ ನಕಲಿ ಆಧಾರ್ ಕಾರ್ಡ್, ಅಂಕಪಟ್ಟಿ ಹಾಗೂ ಸಿಪಿಯು, ಕಂಪ್ಯೂಟರ್ ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸರು ಗ್ಯಾಂಗ್ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.