ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲ, ಶ್ರುತಿ ಮತ್ತು ಮಾಳವಿಕ ಅವಿನಾಶ್ ಅವರು ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ನಟ ದಿವಂಗತ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದರು.
ಇದೇ ವೇಳೆ ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ. ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಮಲ್ಲೇಶ್ವರಂನ ರಸ್ತೆಗೆ ನಾಮಕರಣ ಮಾಡುವಂತೆಯೂ ಮನವಿ ಮಾಡಿದ್ದಾರೆ. ಮನವಿ ಸ್ವೀರಿಸಿದ ಸಿಎಂ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಕನ್ನಡ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲ, ಶ್ರುತಿ ಮತ್ತು ಮಾಳವಿಕ ಅವಿನಾಶ್ ಅವರು ಇಂದು ನನ್ನನ್ನು ಭೇಟಿಯಾಗಿ ದಿವಂಗತ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದರು.
— Siddaramaiah (@siddaramaiah) September 2, 2025
ಇದೇ ವೇಳೆ ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ. ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಮಲ್ಲೇಶ್ವರಂನ… pic.twitter.com/n6sLjmSm0Z