ಬೆಂಗಳೂರು : ಹಿರಿಯ ನಾಗರಿಕರು ಸರ್ಕಾರಿ ಕಛೇರಿಗಳಿಗೆ ಭೇಟಿ ನೀಡಿದಾಗ ಗೌರವದಿಂದ ವರ್ತಿಸುವಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಹಿರಿಯ ನಾಗರಿಕರು ಸರ್ಕಾರಿ ಕಛೇರಿಗಳಿಗೆ ತಮ್ಮ ಕೆಲಸದ ನಿಮಿತ್ತ ಭೇಟಿ ನೀಡಿದಾಗ ಅವರೊಂದಿಗೆ ಗೌರವದಿಂದ ವರ್ತಿಸಿ, ಆಸನದ ವ್ಯವಸ್ಥೆಯನ್ನು ಮಾಡುವಂತೆ ಹಾಗೂ ಅವರುಗಳ ಮನವಿ/ ಕೋರಿಕೆಗಳನ್ನು ಆದ್ಯತೆಯ ಮೇಲೆ ಪರಿಗಣಿಸಿ ಇಲಾಖೆಗಳು ಕೈಗೊಂಡಿರುವ ಕ್ರಮಗಳ ಮಾಹಿತಿಯನ್ನು ಹಿರಿಯ ನಾಗರಿಕರಿಗೆ ತಲುಪಿಸುವ ವ್ಯವಸ್ಥೆಯನ್ನು ಮಾಡುವಂತೆ ಸ್ಪಷ್ಟ ನಿರ್ದೇಶನದೊಂದಿಗೆ ಈಗಾಗಲೇ ಸುತ್ತೋಲೆ ಸಂಖ್ಯೆ ಸಿಆಸುಇ 38 ಕತವ 2021, ದಿನಾಂಕ: 21-06-2021 ನ್ನು ಹೊರಡಿಸಲಾಗಿರುತ್ತದೆ.
ಆದರೆ, ಸದರಿ ಸುತ್ತೋಲೆಯನ್ನು ಪಾಲಿಸದೇ ಇರುವ ಬಗ್ಗೆ ಹಾಗೂ ಸರ್ಕಾರದ ನಿರ್ದೇಶನಗಳನ್ನು ಉಲ್ಲಂಘಿಸುತ್ತಿರುವ ಬಗ್ಗೆ ದೂರುಗಳು ಸ್ವೀಕೃತವಾಗಿದ್ದರಿಂದ, ದಿನಾಂಕ: 21-06-2021ರ ಸುತ್ತೋಲೆಯನ್ನು ಅಕ್ಷರಶ: ಪಾಲಿಸುವಂತೆ ಎಲ್ಲಾ ಇಲಾಖೆಗಳು ತಮ್ಮ ಅಧೀನ ಕಚೇರಿಗಳಿಗೆ ಸ್ಪಷ್ಟ ಸೂಚನೆ ನೀಡುವಂತೆ ಹಾಗೂ ಈ ಬಗ್ಗೆ ದೂರುಗಳು ಸ್ವೀಕತವಾದಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದೆಂದು ಪರಿಷ್ಕೃತ ಸುತ್ತೋಲೆ ಸಂಖ್ಯೆ ಸಿಆಸುಇ 78 ಕತವ 2022, ದಿನಾಂಕ: 07-06-2022ನ್ನು ಹೊರಡಿಸಲಾಗಿರುತ್ತದೆ. ಆದಾಗ್ಯೂ ಸದರಿ ಸುತ್ತೋಲೆಗಳಲ್ಲಿನ ಸೂಚನೆಗಳನ್ನು ಸರ್ಕಾರಿ ಕಛೇರಿಗಳಲ್ಲಿ ಪಾಲಿಸುತ್ತಿಲ್ಲವೆಂದು ದೂರುಗಳು ಸ್ವೀಕೃತವಾಗುತ್ತಿದೆ.
ಸರ್ಕಾರದ ಕಛೇರಿಗಳಿಗೆ ಭೇಟಿ ನೀಡುವ ಹಿರಿಯ ನಾಗರಿಕರನ್ನು ಒಳಗೊಂಡಂತೆ, ಎಲ್ಲಾ ಸಾರ್ವಜನಿಕರನ್ನು ಗೌರವದಿಂದ ৮০, ಅವರುಗಳಿಗೆ ಆಸನದ ವ್ಯವಸ್ಥೆಯನ್ನು ಮಾಡುವಂತೆ, ತಮ್ಮ ಕೆಲಸದ ನಿಮಿತ್ತ ಕಛೇರಿಗಳಿಗೆ ಭೇಟಿ ನೀಡಿದಾಗ ಅವರ ಮನವಿ/ಕೋರಿಕೆಗಳನ್ನು ಆದ್ಯತೆ ಮೇಲೆ ಪರಿಗಣಿಸಿ ಇಲಾಖೆಗಳು ಕೈಗೊಂಡಿರುವ ಕ್ರಮದ ಮಾಹಿತಿಯನ್ನು ಅವರುಗಳಿಗೆ ತಲುಪಿಸುವ ವ್ಯವಸ್ಥೆ ಮಾಡುವಂತೆ ಹಾಗೂ ಇನ್ನು ಮುಂದೆ ಈ ಕುರಿತು ನಿರ್ದಿಷ್ಟ ದೂರುಗಳು ಸ್ವೀಕೃತವಾದಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದೆಂದು ಈ ಮೂಲಕ ಮತ್ತೊಮ್ಮೆ ತಿಳಿಸುತ್ತಾ, ಇಲಾಖಾ ಮುಖ್ಯಸ್ಥರು ತಮ್ಮ ಅಧೀನ ಇಲಾಖೆಗಳಿಗೆ ಮತ್ತು ಅಧಿಕಾರಿ/ಸಿಬ್ಬಂದಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆಯೂ ಸಹ ಸೂಚಿಸಿದೆ.

