BREAKING NEWS: ಪಾಕಿಸ್ತಾನದ ಶೆಲ್ ದಾಳಿಗೆ ಜಮ್ಮು ಕಾಶ್ಮೀರದ ಹಿರಿಯ ಸರ್ಕಾರಿ ಅಧಿಕಾರಿ ಬಲಿ

ಜಮ್ಮು ಕಾಶ್ಮೀರದ ರಜೌರಿಯಲ್ಲಿ ಪಾಕಿಸ್ತಾನದ ಶೆಲ್ ದಾಳಿಗೆ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ. ಜಮ್ಮು ಹೆಚ್ಚುವರಿ ಜಿಲ್ಲಾ ಅಭಿವೃದ್ಧಿ ಆಯುಕ್ತ ರಾಜಕುಮಾರ ಥಾಫ್ಟಾ ಶೆಲ್ ದಾಳಿಯಿಂದ ಸಾವನ್ನಪ್ಪಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮಾಹಿತಿ ನೀಡಿದ್ದಾರೆ.

ರಾಜೌರಿಯಿಂದ ಆಘಾತಕಾರಿ ಸುದ್ದಿ. ನಾವು ಜಮ್ಮು ಮತ್ತು ಕಾಶ್ಮೀರ ಆಡಳಿತ ಸೇವೆಗಳ ಸಮರ್ಪಿತ ಅಧಿಕಾರಿಯನ್ನು ಕಳೆದುಕೊಂಡಿದ್ದೇವೆ. ನಿನ್ನೆಯಷ್ಟೇ ಅವರು ಜಿಲ್ಲೆಯಾದ್ಯಂತ ಉಪ ಮುಖ್ಯಮಂತ್ರಿಯೊಂದಿಗೆ ಇದ್ದರು ಮತ್ತು ನಾನು ಅಧ್ಯಕ್ಷತೆ ವಹಿಸಿದ್ದ ಆನ್‌ಲೈನ್ ಸಭೆಯಲ್ಲಿ ಭಾಗವಹಿಸಿದ್ದರು. ಇಂದು ಅಧಿಕಾರಿಯ ನಿವಾಸದ ಮೇಲೆ ಪಾಕ್ ಶೆಲ್ ದಾಳಿ ನಡೆದು, ರಾಜೌರಿ ಪಟ್ಟಣವನ್ನು ಗುರಿಯಾಗಿಸಿಕೊಂಡು ನಮ್ಮ ಹೆಚ್ಚುವರಿ ಜಿಲ್ಲಾ ಅಭಿವೃದ್ಧಿ ಆಯುಕ್ತ ರಾಜ್ ಕುಮಾರ್ ಥಾಪ್ಪಾ ಸಾವನ್ನಪ್ಪಿದರು. ಈ ಭೀಕರ ಜೀವಹಾನಿಯಿಂದ ನನ್ನ ಆಘಾತ ಮತ್ತು ದುಃಖವನ್ನು ವ್ಯಕ್ತಪಡಿಸಲು ನನಗೆ ಪದಗಳಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಒಮರ್ ಅಬ್ದುಲ್ಲಾ ತಿಳಿಸಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನದಿಂದ ಶೆಲ್ ದಾಳಿ ನಡೆಸಲಾಗಿದ್ದು, ಶೆಲ್ ದಾಳಿಯಿಂದಾಗಿ ಜಮ್ಮು ನಗರದಲ್ಲಿ ಮನೆಗಳಿಗೆ ಹಾನಿಯಾಗಿದೆ. ಜಮ್ಮು ಮತ್ತು ಸಾಂಬಾ ಜಿಲ್ಲೆಗಳ ಸುಚೇತನಗಢ, ರಾಮಗಢ ವಲಯದ ಗಡಿಭಾಗದಲ್ಲಿ ಪಾಕಿಸ್ತಾನದಿಂದ ಶೆಲ್ ದಾಳಿ ನಡೆಸಲಾಗಿದೆ.

ನಾಗರಿಕರನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಗಡಿಯಲ್ಲಿ ಶೆಲ್ ದಾಳಿಯನ್ನು ಮುಂದುವರೆಸಿದೆ. ಭಾರತೀಯ ಸೇನೆ ಪಾಕಿಸ್ತಾನಕ್ಕೆ ತಕ್ಕ ಪ್ರತ್ಯುತ್ತರ ನೀಡಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read