HomeLatest Newsಹಿರಿಯ ಪತ್ರಕರ್ತ 'ಹಿಂದೂ ರಾಮಯ್ಯ' ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

ಹಿರಿಯ ಪತ್ರಕರ್ತ ‘ಹಿಂದೂ ರಾಮಯ್ಯ’ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಹಿರಿಯ ಪತ್ರಕರ್ತ ಹಿಂದೂ ರಾಮಯ್ಯ ಎಂದೇ ಖ್ಯಾತರಾಗಿದ್ದ ಪಿ. ರಾಮಯ್ಯ(93) ಮಂಗಳವಾರ ರಾತ್ರಿ ನಿಧನರಾಗಿದ್ದಾರೆ. ವಿಧಾನ ಪರಿಷತ್ ಸದಸ್ಯರಾಗಿಯೂ ರಾಮಯ್ಯ ಕಾರ್ಯನಿರ್ವಹಿಸಿದ್ದರು.

ಅನಾರೋಗ್ಯದ ಕಾರಣ ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಿ. ರಾಮಯ್ಯ ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. 1933ರ ಸೆಪ್ಟೆಂಬರ್ 12ರಂದು ಜನಿಸಿದ ರಾಮಯ್ಯ ಇಬ್ಬರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ. ‘ದಿ ಹಿಂದೂ’ ಪತ್ರಿಕೆಯಲ್ಲಿ ಐದು ದಶಕಗಳ ಕಾಲ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ಹಿಂದೂ ರಾಮಯ್ಯ ಎಂದೇ ಜನಪ್ರಿಯರಾಗಿದ್ದರು. ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿಗೆ ಭಾಜನರಾಗಿದ್ದರು. ಪತ್ರಿಕಾ ಅಕಾಡೆಮಿ ಸದಸ್ಯರಾಗಿದ್ದರು. ಸಣ್ಣ ಪತ್ರಿಕೆಗಳ ಸಮಸ್ಯೆಗಳ ಅಧ್ಯಯನಕ್ಕೆ ರಚಿಸಿದ್ದ ಸಮಿತಿ ಅಧ್ಯಕ್ಷರಾಗಿ ಸಮಸ್ಯೆಗೆ ಪರಿಹಾರ ದೊರಕಿಸಿಕೊಟ್ಟಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬುಧವಾರ ಬೆಳಗ್ಗೆ 9 ಗಂಟೆಯಿಂದ ಸದಾಶಿವನಗರದ ಅವರ ಮನೆಯಲ್ಲಿ ಸಾರ್ವಜನಿಕರ ದರ್ಶನಕ್ಕೆ ಪಾರ್ಥಿವ ಶರೀರ ಇಡಲಾಗುವುದು. ನಂತರ ಅಂತ್ಯಕ್ರಿಯೆ ನೆರವೇರಿಸಲಾಗುವುದು.

ಸಿಎಂ ಸಿದ್ದರಾಮಯ್ಯ ಸಂತಾಪ

ಪಿ. ರಾಮಯ್ಯ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಹಿರಿಯ ಪತ್ರಕರ್ತ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ಪಿ.ರಾಮಯ್ಯ ಅವರ ನಿಧನದಿಂದ ದು:ಖಿತನಾಗಿದ್ದೇನೆ. ‘ದಿ ಹಿಂದೂ’ ಪತ್ರಿಕೆಯಲ್ಲಿ ಐದು ದಶಕಗಳಿಗಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದ ರಾಮಯ್ಯ ಅವರು ನನ್ನ ಹಿತಚಿಂತಕರಾಗಿದ್ದರು. ಪತ್ರಕರ್ತರಾಗಿ ಸದಾ ರಾಜ್ಯದ ಹಿತಕ್ಕಾಗಿ ಕೆಲಸ ಮಾಡಿದ್ದ ರಾಮಯ್ಯ ಅವರಲ್ಲಿದ್ದ ರಾಜಕೀಯ, ಇತಿಹಾಸ, ಸಂಸ್ಕೃತಿ ಮತ್ತು ಸಾಮಾಜಿಕ ವಿದ್ಯಮಾನಗಳ ಜ್ಞಾನ-ಅನುಭವ ಬೆರಗುಗೊಳಿಸುತಿತ್ತು ಎಂದು ತಿಳಿಸಿದ್ದಾರೆ.

ವಿಧಾನ ಪರಿಷತ್ ಸದಸ್ಯರಾಗಿಯೂ ಅವರು ಪರಿಣಾಮಕಾರಿಯಾಗಿ ಕೆಲಸ ಮಾಡಿದ್ದರು. ಸಣ್ಣ ಪತ್ರಿಕೆಗಳ ಸಮಸ್ಯೆಗಳ ಅಧ್ಯಯನಕ್ಕಾಗಿ ರಚಿಸಲಾಗಿದ್ದ ಸಮಿತಿಯ ಅಧ್ಯಕ್ಷರಾಗಿ ಸಣ್ಣ ಪತ್ರಿಕೆಗಳ ಸಮಸ್ಯೆಗೆ ಪರಿಹಾರ ದೊರಕಿಸಿಕೊಡಲು ಶ್ರಮಿಸಿದ್ದರು ಎಂದರು.

ರಾಮಯ್ಯ ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ. ಅವರ ಕುಟುಂಬದ ಸದಸ್ಯರ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular