HomeLatest NewsBREAKING : ಹಿರಿಯ ಪತ್ರಕರ್ತ ಕೆ.ವಿ.ಶ್ರೀನಿವಾಸನ್ ನಿಧನ : CM ಸಿದ್ದರಾಮಯ್ಯ ಸಂತಾಪ.!

BREAKING : ಹಿರಿಯ ಪತ್ರಕರ್ತ ಕೆ.ವಿ.ಶ್ರೀನಿವಾಸನ್ ನಿಧನ : CM ಸಿದ್ದರಾಮಯ್ಯ ಸಂತಾಪ.!

ಬೆಂಗಳೂರು :  ಮೈಸೂರಿನ ಪತ್ರಿಕೋದ್ಯಮ ವಲಯದಲ್ಲಿ “ಬ್ರದರ್ ” ಎಂದು ಪ್ರೀತಿಯಿಂದ ಕರೆಯಲ್ಪಡುತ್ತಿದ್ದ ಹಿರಿಯ ಪತ್ರಕರ್ತ ಕೆ.ವಿ. ಶ್ರೀನಿವಾಸನ್ ಅವರು ಶುಕ್ರವಾರ ಸಂಜೆ ಹುಣಸೂರು ತಾಲ್ಲೂಕಿನ ಕಲ್ಕುಣಿಕೆ ಗ್ರಾಮದಲ್ಲಿ ನಿಧನರಾದರು. ಅವರಿಗೆ 81 ವರ್ಷ ವಯಸ್ಸಾಗಿತ್ತು ಮತ್ತು ವಯೋಸಹಜ ಸಮಸ್ಯೆಗಳಿಂದಾಗಿ ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. .ಶ್ರೀನಿವಾಸನ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ   ‘ನಾಡಿನ ಹಿರಿಯ ಪತ್ರಕರ್ತ, ಪತ್ರಿಕಾ ವಲಯದಲ್ಲಿ ‘ಬ್ರದರ್’ ಎಂದೇ ಕರೆಯಲ್ಪಡುತ್ತಿದ್ದ ಗಾಂಧಿವಾದಿ ಹೋರಾಟಗಾರರೂ ಆದ ಕೆ.ವಿ.ಶ್ರೀನಿವಾಸನ್ ಅವರ ನಿಧನದಿಂದ ದುಃಖಿತನಾಗಿದ್ದೇನೆ.ಹುಣಸೂರು ಸಮೀಪದ ಕಲ್ಕುಣಿಕೆ ಗ್ರಾಮದವರಾದ ಶ್ರೀನಿವಾಸನ್ ಸರಳ ನಡೆ, ನುಡಿ, ಪ್ರಾಮಾಣಿಕತೆ ಮತ್ತು ವೃತ್ತಿ ಬದ್ಧತೆಯಿಂದ ಜನಾನುರಾಗಿಯಾಗಿದ್ದರು. ಸುದೀರ್ಘಕಾಲ ಮಾಧ್ಯಮರಂಗದಲ್ಲಿ ಸೇವೆ ಸಲ್ಲಿಸಿ ಇತ್ತೀಚೆಗೆ ವಿಶ್ರಾಂತ ಜೀವನ ನಡೆಸುತ್ತಿದ್ದರು. ಹಲವಾರು ಪತ್ರಕರ್ತರನ್ನು ರೂಪಿಸಿದ ಹಿರಿಮೆ ಅವರದ್ದಾಗಿತ್ತು.

ಮೈಸೂರಿನ ನಾರಾಯಣ ಶಾಸ್ತ್ರಿ ರಸ್ತೆಯ ಅನಾಥಾಲಯದಲ್ಲಿ ನಾಲ್ಕು ದಶಕಗಳ ಕಾಲ ಬಾಡಿಗೆ ಕೋಣೆಯಲ್ಲಿ ವಾಸಿಸುತ್ತಾ, ವೃತ್ತಿಜೀವನ ಸಾಗಿಸಿದ್ದು ಅವರ ಪ್ರಾಮಾಣಿಕತೆ ಮತ್ತು ದಕ್ಷತೆಗೆ ಹಿಡಿದ ಕನ್ನಡಿ. ಆತ್ಮೀಯರಾಗಿದ್ದ ಶ್ರೀನಿವಾಸನ್ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬ ವರ್ಗಕ್ಕೆ ನನ್ನ ಸಂತಾಪಗಳು’ ಎಂದು ಟ್ವೀಟ್ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ
https://twitter.com/siddaramaiah/status/2020005033077841981

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular