BIG NEWS : ಹಿರಿಯ ಪತ್ರಕರ್ತ ‘ಶಶಿಧರ್ ಭಟ್’ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ; ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಹಿರಿಯ ಪತ್ರಕರ್ತ ಶಶಿಧರ್ ಭಟ್ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಮೈಸೂರಿನ ಗೋಪಾಲಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಪತ್ರಕರ್ತರಾದ ಶಶಿಧರ್ ಭಟ್ ಅವರಿಗೆ ಸಿಎಂ ಸಿದ್ದರಾಮಯ್ಯಕರೆಮಾಡಿ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ಶಶಿಧರ ಭಟ್ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ, ಆಸ್ಪತ್ರೆಯ ವೈದ್ಯರ ಜೊತೆಗೂ ಮಾತನಾಡಿ ಶಶಿಧರ್ ಭಟ್ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದು, ಮುತುವರ್ಜಿಯಿಂದ ಅವರ ಆರೈಕೆ ಮಾಡುವಂತೆ ತಿಳಿಸಿದ್ದೇನೆ. ಸಮಾಜದ ಒಳಿತಿಗಾಗಿ ನಿರ್ಭೀತ ಧ್ವನಿಯಾಗಿದ್ದ ಶಶಿಧರ್ ಭಟ್ಟರು ಆದಷ್ಟು ಬೇಗ ಗುಣಮುಖರಾಗಿ ಬರಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

https://twitter.com/siddaramaiah/status/1815269191131267336

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read