HomeKarnatakaಹಿರಿಯ ಪೊಲೀಸ್ ಅಧಿಕಾರಿಗಳಿಗೆ ನೀಡಿದ್ದ ಆರ್ಡರ್ಲಿ ಬದಲಿಗೆ ಪರ್ಯಾಯ ವ್ಯವಸ್ಥೆ ರೂಪಿಸಲು ಆದೇಶ

ಹಿರಿಯ ಪೊಲೀಸ್ ಅಧಿಕಾರಿಗಳಿಗೆ ನೀಡಿದ್ದ ಆರ್ಡರ್ಲಿ ಬದಲಿಗೆ ಪರ್ಯಾಯ ವ್ಯವಸ್ಥೆ ರೂಪಿಸಲು ಆದೇಶ

ಬೆಂಗಳೂರು: ಪೊಲೀಸ್ ಅಧೀಕ್ಷಕರು(ಎಸ್ಪಿ) ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ನೀಡಲಾಗಿದ್ದ ಆರ್ಡರ್ಲಿ ಬದಲಾಗಿ ಪರ್ಯಾಯ ವ್ಯವಸ್ಥೆ ರೂಪಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ. ಸಲೀಂ ಆದೇಶಿಸಿದ್ದಾರೆ.

ಈ ಹಿಂದೆ ಪೊಲೀಸ್ ಕಾನ್ಸ್ ಟೇಬಲ್, ಹೆಡ್ ಕಾನ್ಸ್ ಟೇಬಲ್ ಗಳನ್ನು ಆರ್ಡರ್ಲಿಗಳನ್ನಾಗಿ ನೇಮಕ ಮಾಡಿಕೊಳ್ಳಲಾಗಿತ್ತು. ಈಗ ಆರ್ಡರ್ಲಿಗಳ ಸ್ಥಾನಕ್ಕೆ ಹೋಂ ಗಾರ್ಡ್ಸ್ ಅಥವಾ ಹೊರಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ನೇಮಿಸಿಕೊಳ್ಳಲು ಆದೇಶಿಸಲಾಗಿದೆ.

ಹೊಸ ಆದೇಶದ ಪ್ರಕಾರ ಎಸ್ಪಿ ಸೇರಿದಂತೆ ಡಿಜಿಪಿ, ಐಜಿಪಿ ಹಂತದ ಅಧಿಕಾರಿಗಳು ಒಟ್ಟು 373 ಆರ್ಡರ್ಲಿ ಅಥವಾ ಅನುಯಾಯಿಗಳನ್ನು ನೇಮಿಸಿಕೊಳ್ಳಬಹುದು. ಒಂದು ವೇಳೆ ಅಗತ್ಯವಿಲ್ಲದವರು ತಮಗೆ ನೇಮಿಸಿಕೊಳ್ಳಲು ನಿಗದಿಪಡಿಸಿದಂತೆ ಹೊರಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿ ಪಡೆದುಕೊಂಡು ಆರ್ಡರ್ಲಿ ಭತ್ಯೆ ಪಡೆಯಬಹುದು ಎಂದು ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರ್ಡರ್ಲಿಗೆ ನೇಮಕವಾಗಿದ್ದ ಪೊಲೀಸ್ ಸಿಬ್ಬಂದಿ ಹಿರಿಯ ಅಧಿಕಾರಿಗಳ ಮನೆಯಲ್ಲಿ ಕೆಲಸ ಮಾಡುವುದು, ತರಕಾರಿ ತರುವುದು, ಮಕ್ಕಳು ಮತ್ತು ಕುಟುಂಬ ಸದಸ್ಯರ ಜೊತೆಗೆ ಶಾಪಿಂಗ್ ಹೋಗುವುದು ಸೇರಿದಂತೆ ಎಲ್ಲಾ ರೀತಿಯ ಮನೆ ಕೆಲಸ ಮಾಡಿಕೊಂಡಿದ್ದರು, ಕಾನೂನು ಮತ್ತು ಸುವ್ಯವಸ್ಥೆ ಕೆಲಸಕ್ಕೆ ನೇಮಕವಾದ ಸಿಬ್ಬಂದಿಯಿಂದ ಹಿರಿಯ ಅಧಿಕಾರಿಗಳ ಮನೆಯಲ್ಲಿ ಮನೆ ಕೆಲಸ ಮಾಡಿಸುವುದು ಸರಿಯಲ್ಲ ಎನ್ನುವ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ,

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular