BREAKING : ಹಿರಿಯ ರಂಗಕರ್ಮಿ, ನಿರ್ದೇಶಕ ‘ಸದಾನಂದ ಸುವರ್ಣ’ ವಿಧಿವಶ ; ಸಿಎಂ ಸಿದ್ದರಾಮಯ್ಯ ಸಂತಾಪ.!

ಬೆಂಗಳೂರು : ಹಿರಿಯ ರಂಗಕರ್ಮಿ, ನಿರ್ದೇಶಕ ಸದಾನಂದ ಸುವರ್ಣ ವಿಧಿವಶರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಹಿರಿಯ ರಂಗಕರ್ಮಿ, ಚಲನಚಿತ್ರ ನಿರ್ದೇಶಕ- ನಿರ್ಮಾಪಕ ಸದಾನಂದ ಸುವರ್ಣರ ನಿಧನದ ಸುದ್ದಿ ಕೇಳಿ ದು:ಖವಾಯಿತು. ಸದಾನಂದ ಸುವರ್ಣರು ನಿರ್ಮಿಸಿದ್ದ ‘‘ಘಟಶ್ರಾದ್ಧ’’ ಚಿತ್ರ ಮತ್ತು ನಿರ್ದೇಶಿಸಿದ್ದ ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರ ‘’ಕುಬಿ ಮತ್ತು ಇಯಾಲ’’ ಕತೆಯನ್ನಾಧರಿಸಿದ ಚಿತ್ರಗಳೆರಡೂ ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿಗಳಿಗೆ ಭಾಜನವಾಗಿವೆ. ನೂರಾರು ಕನ್ನಡ ಮತ್ತು ತುಳು ನಾಟಕಗಳನ್ನು ನಿರ್ದೇಶಿಸಿದ್ದ ಸುವರ್ಣರ ರಂಗಗರಡಿಯಿಂದ ಬಂದಿರುವ ಹಲವಾರು ಪ್ರತಿಭಾವಂತ ನಟ-ನಟಿಯರು ಕಲಾಜಗತ್ತಿನಲ್ಲಿ ಬದುಕು ಕಟ್ಟಿಕೊಂಡಿದ್ದಾರೆ. ಸದಾನಂದ ಸುವರ್ಣರನ್ನು ಕಳೆದುಕೊಂಡಿರುವ ಅವರ ಶಿಷ್ಯವರ್ಗ ಮತ್ತು ಅಭಿಮಾನಿ ಬಳಗದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

https://twitter.com/siddaramaiah/status/1813154124177023255

 

 

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read