ಬೆಂಗಳೂರು: ದೇಶವನ್ನೇ ಬೆಚ್ಚಿ ಬೀಳಿಸಿದ್ದ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧ ಸಾಬೀತಾಗಿದೆ. ಮನೆ ಕೆಲಸದ ಮಹಿಳೆ ಬೆದರಿಸಿ ಅತ್ಯಾಚಾರ ಎಸೆಗಿರುವುದು ಸಾಬೀತಾಗಿದ್ದು, ಪ್ರಜ್ವಲ್ ರೇವಣ್ಣ ಅಪರಾಧಿ ಎಂದು ಶುಕ್ರವಾರ ನ್ಯಾಯಾಲಯ ಘೋಷಿಸಿದೆ.
47 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ಸಂಬಂಧ ಶುಕ್ರವಾರ ಪ್ರಜ್ವಲ್ ರೇವಣ್ಣ ವಿರುದ್ಧ ಅಂತಿಮ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರದ ಸಂತೋಷ್ ಗಜಾನನ ಭಟ್ ಪ್ರಜ್ವಲ್ ರೇವಣ್ಣ ಅಪರಾಧಿ ಎಂದು ಪ್ರಕಟಿಸಿದ್ದು, ಶನಿವಾರ ಶಿಕ್ಷೆಯ ಪ್ರಮಾಣ ಪ್ರಕಟಿಸಲಾಗುವುದು.
ನ್ಯಾಯಾಲಯ ಅಪರಾಧಿ ಎಂದು ಘೋಷಿಸಿದ ಹಿನ್ನೆಲೆಯಲ್ಲಿ ಈಗಾಗಲೇ ಒಂದು ವರ್ಷ ನಾಲ್ಕು ತಿಂಗಳಿನಿಂದ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಅವರಿಗೆ ಜೈಲುವಾಸ ಕಾಯಂ ಆಗಲಿದ್ದು, ಜಾಮೀನು ಸಿಗುವ ಬಾಗಿಲು ಮುಚ್ಚಲಿವೆ.
ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಕನಿಷ್ಠ 10 ವರ್ಷದಿಂದ ಜೀವಾವಧಿ ಶಿಕ್ಷೆಯಾಗುವ ಸಾಧ್ಯತೆ ಇದೆ ಎಂದು ಎಸ್.ಪಿ.ಪಿ. ಅಶೋಕ್ ನಾಯ್ಕ್ ಹೇಳಿದ್ದಾರೆ.