HomeLatest NewsBIG NEWS: ಕೇಂದ್ರ ಸರ್ಕಾರಿ ನೌಕರರ ಯುಪಿಎಸ್ ಪಿಂಚಣಿ ಯೋಜನೆ ಆಯ್ಕೆಗೆ ಸೆ. 30 ಅಂತಿಮ...

BIG NEWS: ಕೇಂದ್ರ ಸರ್ಕಾರಿ ನೌಕರರ ಯುಪಿಎಸ್ ಪಿಂಚಣಿ ಯೋಜನೆ ಆಯ್ಕೆಗೆ ಸೆ. 30 ಅಂತಿಮ ಗಡುವು

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಏಕೀಕೃತ ಪಿಂಚಣಿ ಯೋಜನೆ(ಯುಪಿಎಸ್) ಆಯ್ಕೆ ಮಾಡಿಕೊಳ್ಳಲು ಸೆಪ್ಟೆಂಬರ್ 30 ಅಂತಿಮ ಗಡುವು ಎಂದು ಕೇಂದ್ರ ಹಣಕಾಸು ಸಚಿವಾಲಯ ಮಾಹಿತಿ ನೀಡಿದೆ.

ಕಳೆದ ಏಪ್ರಿಲ್ 1ರಿಂದ ಕೇಂದ್ರ ಸರ್ಕಾರಿ ನೌಕರರಿಗೆ ಯುಪಿಎಸ್ ಆಯ್ಕೆಯನ್ನು ಸರ್ಕಾರ ನೀಡಿದೆ. ಆಗಸ್ಟ್ 25ರಂದು ಈಗಾಗಲೇ ಯುಪಿಎಸ್ ಆಯ್ಕೆ ಮಾಡಿಕೊಂಡವರಿಗೆ ರಾಷ್ಟ್ರೀಯ ಪಿಂಚಣಿ ಯೋಜನೆ(ಎನ್‌ಪಿಎಸ್‌ ಗೆ) ಮರಳಲು ಒಂದು ಬಾರಿಯ ಅವಕಾಶ ಘೋಷಿಸಿತ್ತು. ಈಗ ಯುಪಿಎಸ್‌ ಗೆ ಮರಳಲು ಬಯಸುವವರ ನೌಕರರು ಮತ್ತು ನಿವೃತ್ತ ಪಿಂಚಣಿದಾರರಿಗೆ ಅಂತಿಮ ಅವಕಾಶ ನೀಡಲಾಗಿದೆ.

ಅರ್ಹ ನೌಕರರು ಕೊನೆಗಳಿಗೆಯಲ್ಲಿ ತರಾತುರಿಯಿಂದ ತಪ್ಪಿಸಿಕೊಳ್ಳಲು ಶೀಘ್ರವಾಗಿ ಬದಲಾವಣೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳುವಂತೆ ಹಣಕಾಸು ಸಚಿವಾಲಯ ಮಾಹಿತಿ ನೀಡಿದೆ. ಎನ್‌ಪಿಎಸ್ ವ್ಯವಸ್ಥೆಯಲ್ಲಿ ಉಳಿದವರಿಗೆ ಸೆಪ್ಟೆಂಬರ್ 30ರ ನಂತರ ಮತ್ತೆ ಏಕೀಕೃತ ಪಿಂಚಣಿ ವ್ಯವಸ್ಥೆಗೆ ವರ್ಗಾವಣೆಯಾಗಲು ಅವಕಾಶವಿರುವುದಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular