ಬೆಂಗಳೂರು: ಸರ್ಕಾರಿ ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರ ಅಥವಾ ಅಕ್ರಮಗಳ ಆರೋಪ ಸಂಬಂಧ ಪ್ರತ್ಯೇಕ ನ್ಯಾಯಾಲಯ ಸ್ಥಾಪನೆ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಬಿಜೆಪಿಯ ವೈ.ಎಂ. ಸತೀಶ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರಿ ಅಧಿಕಾರಿಗಳ ವಿರುದ್ಧದ ಆರೋಪಗಳ ತನಿಖೆ ವಿಳಂಬವಾಗಬಾರದು. ಹೀಗಾಗಿ ಜನಪ್ರತಿನಿಧಿಗಳ ಕೋರ್ಟ್ ಮಾದರಿಯಲ್ಲಿ ಪ್ರತ್ಯೇಕ ನ್ಯಾಯಾಲಯ ಸ್ಥಾಪನೆ ಬಗ್ಗೆ ಸಂಬಂಧಿಸಿದವರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

