HomeIndiaಗಮನಿಸಿ : ಆಧಾರ್-ರೇಷನ್ ಕಾರ್ಡ್ ಲಿಂಕ್ ಮಾಡಲು ಸೆ.30 ಕೊನೆಯ ದಿನ

ಗಮನಿಸಿ : ಆಧಾರ್-ರೇಷನ್ ಕಾರ್ಡ್ ಲಿಂಕ್ ಮಾಡಲು ಸೆ.30 ಕೊನೆಯ ದಿನ

ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ (NFSA), 2013 ರ ಪ್ರಕಾರ, ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ.

ಆಧಾರ್-ರೇಷನ್ ಕಾರ್ಡ್ ಲಿಂಕ್ ಗಡುವು ಸೆ. 30ಕ್ಕೆ ಮುಗಿಯಲಿದ್ದು, ಸಾರ್ವಜನಿಕರು ಕೂಡಲೇ ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು.

ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಅನ್ನು ಇನ್ನೂ ಲಿಂಕ್ ಮಾಡಿಲ್ಲವಾದರೆ ಬೇಗನೇ ಮಾಡಿಸಿ.. ಸರ್ಕಾರ ನಿಮಗೆ ಕೊನೆಯ ಅವಕಾಶವನ್ನು ನೀಡಿದೆ. ಮೊದಲು ಕೊನೆಯ ದಿನಾಂಕ 30 ಜೂನ್ 2023 ಆಗಿತ್ತು. ನಂತರ ಸೆ.30 ರವರೆಗೆ ವಿಸ್ತರಿಸಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಂತ್ಯೋದಯ ಅನ್ನ ಯೋಜನೆಯಡಿ ಪ್ರಯೋಜನ ಪಡೆಯುತ್ತಿರುವ ಜನರಿಗೆ ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡುವುದು ಅವಶ್ಯಕವಾಗಿದೆ.ಯುಐಡಿಎಐನ ವೆಬ್ಸೈಟ್ ಮೂಲಕ ರೇಷನ್ ಕಾರ್ಡ್ ಲಿಂಕ್ ಮಾಡಬಹುದು. ರಾಜ್ಯ ಪಿಡಿಎಸ್ ವೆಬ್ಸೈಟ್ ಮೂಲಕವೂ ರೇಷನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಜೋಡಣೆ ಮಾಡಬಹುದು, ಅಲ್ಲದೇ ಸಮೀಪದ ಪಡಿತರ ಕಚೇರಿಗೆ ಹೋಗಿ ಉಚಿತವಾಗಿ ನೀವು ಆಧಾರ್ ನಂಬರ್ ಲಿಂಕ್ ಮಾಡಬಹುದು.

ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡುವುದು ಹೇಗೆ..?

ನಿಮ್ಮ ಆಧಾರ್ ಕಾರ್ಡ್ ಅನ್ನು ನಿಮ್ಮ ಪಡಿತರ ಚೀಟಿಗೆ ಆನ್ಲೈನ್ನಲ್ಲಿ ಲಿಂಕ್ ಮಾಡಲು ಈ ಕೆಳಗಿನ ಹಂತಗಳನ್ನು ಅನುಸರಿಸಿ:
• ನಿಮ್ಮ ರಾಜ್ಯದ ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಪೋರ್ಟಲ್ ಅಧಿಕೃತ ವೆಬ್ಸೈಟ್ ಗೆ ಹೋಗಿ.
• ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ, ಪಡಿತರ ಚೀಟಿ ಸಂಖ್ಯೆ ಮತ್ತು ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯನ್ನು ನಮೂದಿಸಿ.
• ‘ಮುಂದುವರಿಯಿರಿ’ ಮೇಲೆ ಕ್ಲಿಕ್ ಮಾಡಿ.
• ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ಒನ್ ಟೈಮ್ ಪಾಸ್ವರ್ಡ್ (ಒಟಿಪಿ) ಬರುತ್ತದೆ.
• ಒಟಿಪಿ ನಮೂದಿಸಿ ಮತ್ತು ಪಡಿತರ ಚೀಟಿ ಆಧಾರ್ ಕಾರ್ಡ್ ಲಿಂಕ್ ಕ್ಲಿಕ್ ಮಾಡಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular