HomeLatest Newsಸರಣಿ ಅಪಘಾತ: ಸ್ಕೂಟರ್ ನಲ್ಲಿ ತೆರಳುತ್ತಿದ್ದ ನಾಲ್ವರು ಬಾಲಕರು ಸಾವು

ಸರಣಿ ಅಪಘಾತ: ಸ್ಕೂಟರ್ ನಲ್ಲಿ ತೆರಳುತ್ತಿದ್ದ ನಾಲ್ವರು ಬಾಲಕರು ಸಾವು

ಚಾಮರಾಜನಗರ: ಚಾಮರಾಜನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕರಿವರದರಾಜನ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ಸ್ಥಳದಲ್ಲಿ ಸರಣಿ ಅಪಘಾತ ಸಂಭವಿಸಿದೆ.

ಗಾಳಿಪುರ ರಿಂಗ್ ರಸ್ತೆಯಲ್ಲಿ ಲಾರಿ, ಕಾರ್, ನಾಲ್ವರು ಬಾಲಕರಿದ್ದ ಸ್ಕೂಟರ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಸ್ಕೂಟರ್ ನಲ್ಲಿದ್ದ ನಾಲ್ವರು ಬಾಲಕರು ಮೃತಪಟ್ಟಿದ್ದಾರೆ.

ಮೆಹರಾನ್(13), ಆದಾನ್ ಪಾಷಾ(9), ರಯಾನ್(8), ಫೈಜಲ್(11) ಮೃತಪಟ್ಟ ಬಾಲಕರು ಎಂದು ಹೇಳಲಾಗಿದೆ. ತಮಿಳುನಾಡಿನ ಕಡೆಗೆ ತೆರಳುತ್ತಿದ್ದ ಕಾರ್ ಮತ್ತು ಚಾಮರಾಜನಗರ ಕಡೆಗೆ ಬರುತ್ತಿದ್ದ ಲಾರಿಯ ನಡುವೆ ಸಿಲುಕಿದ ಸ್ಕೂಟರ್ ಸಂಪೂರ್ಣ ನಜ್ಗುಜ್ಜಾಗಿದೆ. ಕಾರ್, ಲಾರಿ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸ್ಕೂಟರ್ ನಲ್ಲಿದ್ದ ಬಾಲಕರು ಸಾವನ್ನಪ್ಪಿದ್ದು, ಕಾರ್ ನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular