HomeLatest News3 ಸಾರಿಗೆ ಬಸ್ ಗಳ ನಡುವೆ ಸರಣಿ ಅಪಘಾತ: ಇಬ್ಬರು ಮಹಿಳೆಯರು ಸಾವು: 70 ಮಂದಿಗೆ...

3 ಸಾರಿಗೆ ಬಸ್ ಗಳ ನಡುವೆ ಸರಣಿ ಅಪಘಾತ: ಇಬ್ಬರು ಮಹಿಳೆಯರು ಸಾವು: 70 ಮಂದಿಗೆ ಗಾಯ

ಮಂಡ್ಯ: ಮೂರು ಸಾರಿಗೆ ಬಸ್ ಗಳ ನಡುವೆ ಸರಣಿ ಅಪಘಾತ ಸಂಭವಿಸಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ. ಎಂಟು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದು, 70 ಅಧಿಕ ಮಂದಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 948ರಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬಾಚನಹಳ್ಳಿ ಸಮೀಪ ಭಾನುವಾರ ಸಂಜೆ ಕೊಳ್ಳೆಗಾಲ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಾರಿಗೆ ಬಸ್ ನ ಟೈಯರ್ ಸ್ಪೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಮಳವಳ್ಳಿಯಿಂದ ಕೊಳ್ಳೇಗಾಲದ ಕಡೆಗೆ ಹೋಗುತ್ತಿದ್ದ ಮತ್ತೊಂದು ಸಾರಿಗೆ ಬಸ್ ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಮಳವಳ್ಳಿ ಕಡೆಯಿಂದ ಬಂದ ಇನ್ನೊಂದು ಸಾರಿಗೆ ಬಸ್ ಕೂಡ ಅಪಘಾತಕ್ಕೀಡಾದ ಬಸ್ ಗೆ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಗಾಯಗೊಂಡಿದ್ದ ಮಳವಳ್ಳಿಯ 60 ವರ್ಷದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಐವತ್ತು ವರ್ಷದ ಮತ್ತೊಬ್ಬ ಮಹಿಳೆ ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular