ಬೆಂಗಳೂರು: ಇಂದಿನಿಂದ ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಸರ್ಕಾರವನ್ನು ಹವಣಿಸಲು ವಿಪಕ್ಷಗಳು ಸಿದ್ಧವಾಗಿವೆ. ಮೊದಲ ದಿನವೇ ಚರ್ಚೆಗೆ ಅವಕಾಶ ನೀಡುವಂತೆ ಕೋರಿ ಬಿಜೆಪಿ-ಜೆಡಿಎಸ್ ನಾಯಕರು ನಿಲುವಳಿ ಕೋರಿ ನೀಟಿಸ್ ನೀಡಿದ್ದಾರೆ.
ಮೊದಲ ದಿನವೇ ಚರ್ಚೆಗೆ ಅವಕಾಶ ನೀಡುವಂತೆ ಕೋರಿ ನೋಟಿಸ್ ನೀಡಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಚರ್ಚೆಗೆ ಅವಕಾಶ ಕೋರಿ ನಿಲುವಳಿ ಮಂಡಿಸಿದ್ದಾರೆ.
ಇಂದಿನಿಂದ ಆಗಸ್ಟ್ 22ರವರೆಗೆ ಮುಂಗಾರು ಅಧಿವೇಶನ ನಡೆಯಲಿದ್ದು, ಸರ್ಕಾರದ ವಿರುದ್ಧ ಸಮರಕ್ಕೆ ಬಿಜೆಪಿ-ಜೆಡಿಎಸ್ ಪಕ್ಷಗಳು ತಂತ್ರ ಹೆಣೆದಿವೆ. ಕಾಲ್ತುಳಿತ ದುರಂತ, ಪೊಲೀಸ್ ಅಧಿಕಾರಿಗಳ ಅಮಾನತು ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟು ವಿಪಕ್ಷಗಳು ಸರ್ಕಾರದ ವಿರುದ್ಧ ಮುಗಿಬೀಳುವ ಸಾಧ್ಯತೆ ಇದೆ.
ಇನ್ನು ರಾಜ್ಯದಲ್ಲಿ ರೈತರಿಗೆ ಯೂರಿಯಾ ರಸಗೊಬ್ಬರ ಕೊರತೆ, ಗುತ್ತಿಗೆದಾರರಿಂದ 60 ಪರ್ಸೆಂಟ್ ವಸೂಲಿ ಆರೋಪ, ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಆರೋಪ ಪ್ರಕರಣಗಳ ಬಗ್ಗೆ ಸದನದಲ್ಲಿ ಭಾರಿ ಚರ್ಚೆಯಾಗಲಿದ್ದು, ರಾಜಕೀಯ ವಾಕ್ಸಮರ ಕಾವೇರುವ ಸಾಧ್ಯತೆ ಇದೆ.