ಬೆಂಗಳೂರು: ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಅಧಿವೇಶನದ ಮೊದಲ ದಿನ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗೈರಾಗಲಿದ್ದಾರೆ.
ಇಂದಿನಿಂದ ಡಿಸೆಂಬರ್ 19 ರವರೆಗೆ ಅಧಿವೇಶನ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆಡಳಿತ ಮತ್ತು ವಿರೋಧ ಪಕ್ಷಗಳ ಜಟಾಪಟಿಗೆ ಅಧಿವೇಶನ ಸಾಕ್ಷಿಯಾಗಲಿದೆ. ಮೊದಲ ದಿನವೇ ಡಿಸಿಎಂ ಡಿ.ಕೆ. ಶಿವಕುಮಾರ್ ಅಧಿವೇಶನಕ್ಕೆ ಗೈರಾಗಲಿದ್ದಾರೆ.
ಇಂದು ಡಿ.ಕೆ. ಶಿವಕುಮಾರ್ ತೆಲಂಗಾಣ ಪ್ರವಾಸ ಕೈಗೊಂಡಿದ್ದಾರೆ. ರೈಸಿಂಗ್ ಗ್ಲೋಬಲ್ ಸಮಿಟ್ ನಲ್ಲಿ ಅವರು ಭಾಗವಹಿಸಲಿದ್ದು, ಸಂಜೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ನಾಳೆಯಿಂದ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ.
