HomeKarnatakaವಿಪಕ್ಷ ನಾಯಕರಿಲ್ಲದೆ ಎರಡನೇ ವಾರಕ್ಕೆ ವಿಧಾನ ಮಂಡಲ ಅಧಿವೇಶನ

ವಿಪಕ್ಷ ನಾಯಕರಿಲ್ಲದೆ ಎರಡನೇ ವಾರಕ್ಕೆ ವಿಧಾನ ಮಂಡಲ ಅಧಿವೇಶನ

ಬೆಂಗಳೂರು: ವಿಧಾನ ಮಂಡಲ ಉಭಯ ಸದನಗಳ ಅಧಿವೇಶನ ಇಂದು ಎರಡನೇ ವಾರಕ್ಕೆ ಕಾಲಿಟ್ಟಿದೆ. ಹೀಗಿದ್ದರೂ, ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗಿಲ್ಲ.

ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿ ಎರಡು ತಿಂಗಳಾಗುತ್ತಿದ್ದರೂ, ವಿಧಾನ ಮಂಡಲ ಅಧಿವೇಶನ ಆರಂಭವಾಗಿ ಒಂದು ವಾರ ಕಳೆದರೂ ಪ್ರತಿಪಕ್ಷಕ್ಕೆ ಅಧಿಕೃತ ನಾಯಕರು ಇಲ್ಲದಂತಾಗಿದೆ. ವಿಪಕ್ಷ ನಾಯಕನ ಆಯ್ಕೆ  ಸಂಬಂಧ ಬಿಜೆಪಿ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಆಗಮಿಸಿ ಹಿರಿಯ ಮುಖಂಡರು ಹಾಗೂ ಶಾಸಕರಿಂದ ಅಭಿಪ್ರಾಯ ಪಡೆದುಕೊಂಡಿದ್ದು, ವರಿಷ್ಠರಿಗೆ ವರದಿಯನ್ನು ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆದರೆ, ಇದುವರೆಗೂ ವಿಪಕ್ಷ ನಾಯಕನ ಆಯ್ಕೆ ಮಾಡಲಾಗಿಲ್ಲ. ರಾಜ್ಯ ಬಿಜೆಪಿ ನಾಯಕರಲ್ಲಿ ವಿಪಕ್ಷ ನಾಯಕರಾಗಲು ಹಲವರು ಆಕಾಂಕ್ಷಿಗಳಾಗಿದ್ದಾರೆ. ಪಕ್ಷದ ವರಿಷ್ಠರು ಅಳೆದು ತೂಗಿ ಈ ವೇಳೆಗಾಗಲೇ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಬೇಕಿತ್ತು. ಆದರೆ, ಅಧಿವೇಶನ ಎರಡನೇ ವಾರಕ್ಕೆ ಕಾಲಿಟ್ಟರೂ ಇನ್ನೂ ವಿಪಕ್ಷ ನಾಯಕರು ಇಲ್ಲದಂತಾಗಿದೆ. ಇದು ವಿಪಕ್ಷ ಸದಸ್ಯರಿಗೆ ಮುಜುಗರ ತಂದಿಟ್ಟಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular