HomeIndiaಸಚಿವೆ ಜೊತೆ ಕಾಂಗ್ರೆಸ್‌ ಸೇರಿದ 30 ಪದಾಧಿಕಾರಿಗಳು; ಬಿಜೆಪಿಗೆ ಶಾಕ್!

ಸಚಿವೆ ಜೊತೆ ಕಾಂಗ್ರೆಸ್‌ ಸೇರಿದ 30 ಪದಾಧಿಕಾರಿಗಳು; ಬಿಜೆಪಿಗೆ ಶಾಕ್!

ಅಸ್ಸಾಂ ವಿಧಾನಸಭೆ ಚುನಾವಣೆ ಸಮಯದಲ್ಲಿಯೇ ಬಿಜೆಪಿಗೆ ಬಿಗ್ ಶಾಕ್. 126 ಸದಸ್ಯ ಬಲದ ಅಸ್ಸಾಂ ವಿಧಾನಸಭೆಗೆ ಒಂದೇ ಹಂತದಲ್ಲಿ ಏಪ್ರಿಲ್ 9ರಂದು ಮತದಾನ ನಡೆಯಲಿದೆ. ಆದರೆ ರಾಜ್ಯದ ಆಡಳಿತ ಪಕ್ಷವಾದ ಬಿಜೆಪಿಗೆ ಚುನಾವಣೆ ಸಮಯದಲ್ಲಿಯೇ ಹಿನ್ನಡೆಯಾಗಿದೆ.

2026ರ ಅಸ್ಸಾಂ ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ನಿರಾಕರಿಸಿದ ಹಿನ್ನಲೆಯಲ್ಲಿ ಸಚಿವೆ ನಂದಿತಾ ಗರ್ಲೋಸಾ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಈಗ ಅವರನ್ನು ಬೆಂಬಲಿಸಿ ಬಿಜೆಪಿಯ 30ಕ್ಕೂ ಅಧಿಕ ಪದಾಧಿಕಾರಿಗಳು ಪಕ್ಷ ಬಿಟ್ಟು ಕಾಂಗ್ರೆಸ್‌ ಸೇರಿದ್ದಾರೆ.

ಬಿಜೆಪಿ ಅಸ್ಸಾಂ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡುವಾಗ ನಂದಿತಾ ಗರ್ಲೋಸಾ ಅವರಿಗೆ ಹಾಫ್ಲಾಂಗ್ (ಎಸ್‌ಟಿ) ಕ್ಷೇತ್ರದ ಟಿಕೆಟ್ ನಿರಾಕರಿಸಿತ್ತು. ಈ ಹಿನ್ನಲೆಯಲ್ಲಿ ಅವರು ಪಕ್ಷವನ್ನು ತೊರೆದು ಕಾಂಗ್ರೆಸ್ ಸೇರಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ತನ್ನ 5ನೇ ಪಟ್ಟಿಯಲ್ಲಿ ನಿರ್ಮಲ್ ಲ್ಯಾಂಗ್ಥಾಸಾ ಅವರನ್ನು ಹಾಫ್ಲಾಂಗ್ ಅಭ್ಯರ್ಥಿ ಎಂದು ಘೋಷಣೆ ಮಾಡಿತ್ತು. ಆದರೆ ನಂದಿತಾ ಗರ್ಲೋಸಾ ಸೇರ್ಪಡೆ ಬಳಿಕ ಅವರನ್ನೇ ಅಭ್ಯರ್ಥಿಯನ್ನಾಗಿ ಮಾಡಲಾಗಿದೆ.

ನಂದಿತಾ ಗರ್ಲೋಸಾ ಹಾಫ್ಲೋಂಗ್‌ನ ಶಾಸಕಿ ಮತ್ತು ದಿಮಾ ಹಸಾವೊ ಜಿಲ್ಲೆಯ ಜನಪ್ರಿಯ ನಾಯಕಿ. ನಂದಿತಾ ಗರ್ಲೋಸಾ ಬಿಜೆಪಿ ಬಿಟ್ಟ ಬಳಿಕ ಅವರನ್ನು ಬೆಂಬಲಿಸಿ ಪದಾಧಿಕಾರಿಗಳು ರಾಜೀನಾಮೆ ನೀಡಿದ್ದು, ಪಕ್ಷಕ್ಕೆ ಹಿನ್ನಡೆಯಾಗಿದೆ.

ದಿಮಾ ಹಸಾವೊ ಜಿಲ್ಲೆಯಲ್ಲಿ ನಂದಿತಾ ಗರ್ಲೋಸಾ ಅವರ ರಾಜೀನಾಮೆ ಬಳಿಕ ಬಿಜೆಪಿ ಪಕ್ಷದ ಆಂತರಿಕ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ಮತ್ತು ಆಕ್ರೋಶ ವ್ಯಕ್ತಪಡಿಸಿ ಸುಮಾರು 30 ಪದಾಧಿಕಾರಿಗಳು ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ.

ಮಾರ್ಚ್ 23ರಂದು ಮಾಜಿ ಜಿಲ್ಲಾ ಅಧ್ಯಕ್ಷರು, ಸ್ವಾಯತ್ತ ಮಂಡಳಿ ಸದಸ್ಯರು ಮತ್ತು ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಸೇರಿದಂತೆ ಹಲವು ನಾಯಕರು ಬಿಜೆಪಿಯ ಎಲ್ಲಾ ಹುದ್ದೆಗಳಿಗೆ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜೀನಾಮೆ ನೀಡಿದ್ದಾರೆ.

ಹಾಫ್ಲಾಂಗ್, ಮಾಹೂರ್, ಲಾಂಗ್ಟಿಂಗ್ ಮತ್ತು ದೌತುಹಾಜಾ ಸೇರಿದಂತೆ ಹಲವು ಕ್ಷೇತ್ರಗಳ ಚುನಾವಣೆ ಮೇಲೆ ಇದು ಭಾರೀ ಪರಿಣಾಮ ಬೀರಲಿದೆ ಎಂದು ಅಂದಾಜಿಸಲಾಗಿದೆ. ಗುಡ್ಡಗಾಡು ಜಿಲ್ಲೆಯಲ್ಲಿ ಪಕ್ಷದ ಸಾಂಘಿಕ ಚೌಕಟ್ಟು ಹಾಗೂ ತಳಮಟ್ಟದಲ್ಲಿ ಬಿಜೆಪಿಗೆ ಹಿನ್ನಡೆಯಾಗಿದ್ದು, ಮುಂಬರುವ ದಿನಗಳಲ್ಲಿ ಕಾಂಗ್ರೆಸ್‌ಗೆ ಉತ್ತಮ ಅವಕಾಶವನ್ನು ಒದಗಿಸಿಕೊಡಲಿದೆ ಎಂದು ಅಂದಾಜಿಸಲಾಗಿದೆ.

ಆಡಳಿತ ವಿರೋಧಿ ಅಲೆ ಹಿನ್ನಲೆಯಲ್ಲಿ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಹಲವು ಶಾಸಕರಿಗೆ ಟಿಕೆಟ್ ನೀಡಿಲ್ಲ. ಇದೇ ಮಾದರಿಯಲ್ಲಿ ಹಾಫ್ಲೋಂಗ್‌ನ ನಂದಿತಾ ಗರ್ಲೋಸಾ ಅವರು ಸಹ ಟಿಕೆಟ್ ಕಳೆದುಕೊಂಡಿದ್ದರು. ಆದರೆ ಈಗ ಅವರ ಕಾಂಗ್ರೆಸ್ ಅಭ್ಯರ್ಥಿಯಾಗಿ ಅದೇ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular