HomeKarnatakaBIG NEWS : ರಾಜ್ಯ ಸರ್ಕಾರಕ್ಕೆ ಹಿನ್ನಡೆ : 9 ಮತ್ತು 10ನೇ ತರಗತಿಗೆ RTE...

BIG NEWS : ರಾಜ್ಯ ಸರ್ಕಾರಕ್ಕೆ ಹಿನ್ನಡೆ : 9 ಮತ್ತು 10ನೇ ತರಗತಿಗೆ RTE ವಿಸ್ತರಣೆ ಆದೇಶಕ್ಕೆ ಹೈಕೋರ್ಟ್‌ ತಡೆ

ಬೆಂಗಳೂರು: ಪರಿಶಿಷ್ಟ ಜಾತಿ (SC) ಹಾಗೂ ಪರಿಶಿಷ್ಟ ಪಂಗಡ (ST) ವಿದ್ಯಾರ್ಥಿಗಳಿಗೆ ಖಾಸಗಿ ಶಾಲೆಗಳಲ್ಲಿ RTE (ಶಿಕ್ಷಣ ಹಕ್ಕು ಕಾಯ್ದೆ) ಅಡಿಯಲ್ಲಿ 9 ಮತ್ತು 10ನೇ ತರಗತಿವರೆಗೆ ಉಚಿತ ಶಿಕ್ಷಣ ಮುಂದುವರಿಸಲು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಖಾಸಗಿ ಶಾಲೆಗಳ ಸಂಘಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯ ಮಧ್ಯಂತರ ಆದೇಶ ಹೊರಡಿಸಿದೆ.

ಹೌದು.   ರಾಜ್ಯ ಸರ್ಕಾರವು RTE (ಶಿಕ್ಷಣ ಹಕ್ಕು ಕಾಯ್ದೆ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ 8ನೇ ತರಗತಿವರೆಗೆ ಓದಿರುವ ಪರಿಶಿಷ್ಟ ಜಾತಿ (SC) ಹಾಗೂ ಪರಿಶಿಷ್ಟ ಪಂಗಡ (ST) ವಿದ್ಯಾರ್ಥಿಗಳಿಗೆ 9 ಮತ್ತು 10ನೇ ತರಗತಿಯಲ್ಲಿಯೂ ಉಚಿತ ಶಿಕ್ಷಣ ಮುಂದುವರಿಸಲು ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ರಾಜ್ಯ ಸರ್ಕಾರವು ಮೇ 21, 2026ರಂದು ಹೊರಡಿಸಿದ್ದ ಆದೇಶದ ಮೂಲಕ RTE ಅಡಿಯಲ್ಲಿ ಪ್ರವೇಶ ಪಡೆದ SC/ST ವಿದ್ಯಾರ್ಥಿಗಳು ಅದೇ ಖಾಸಗಿ ಶಾಲೆಯಲ್ಲಿ 9 ಮತ್ತು 10ನೇ ತರಗತಿವರೆಗೆ ಶಿಕ್ಷಣ ಮುಂದುವರಿಸಲು ಅವಕಾಶ ಕಲ್ಪಿಸಿತ್ತು. ಇದರ ಶುಲ್ಕವನ್ನು ಸರ್ಕಾರವೇ ಭರಿಸುವುದಾಗಿ ಘೋಷಿಸಿತ್ತು.

ಆದರೆ ಈ ನಿರ್ಧಾರವನ್ನು ಖಾಸಗಿ ಶಾಲೆಗಳ ಸಂಘಟನೆಗಳು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದವು. RTE ಕಾಯ್ದೆಯ ಮೂಲ ವ್ಯಾಪ್ತಿ 1ರಿಂದ 8ನೇ ತರಗತಿವರೆಗೆ ಮಾತ್ರ ಅನ್ವಯವಾಗುತ್ತದೆ. ಹೀಗಾಗಿ ಸರ್ಕಾರದ ಆದೇಶವು ಕಾಯ್ದೆಯ ಮಿತಿಯನ್ನು ಮೀರುತ್ತದೆ ಎಂದು ಅರ್ಜಿದಾರರು ವಾದಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಸರ್ಕಾರದ ಆದೇಶದ ಜಾರಿಗೆ ಮಧ್ಯಂತರ ತಡೆ ನೀಡಿದ್ದು, ಮುಂದಿನ ವಿಚಾರಣೆ ಪೂರ್ಣಗೊಳ್ಳುವವರೆಗೆ ಆದೇಶ ಜಾರಿಯಾಗುವುದಿಲ್ಲ ಎಂದು ತಿಳಿಸಿದೆ.ರಾಜ್ಯ ಸರ್ಕಾರವು ಮೇ 2026ರಲ್ಲಿ, RTE ಅಡಿಯಲ್ಲಿ 8ನೇ ತರಗತಿವರೆಗೆ ಓದಿದ್ದ SC/ST ವಿದ್ಯಾರ್ಥಿಗಳು ಅದೇ ಶಾಲೆಯಲ್ಲಿ 9 ಮತ್ತು 10ನೇ ತರಗತಿಗೂ ಮುಂದುವರಿಯಲು ಅವಕಾಶ ನೀಡುವ ಆದೇಶ ಹೊರಡಿಸಿತ್ತು. ಈ ಯೋಜನೆಯಡಿ ಶುಲ್ಕವನ್ನು ಸರ್ಕಾರವೇ ಭರಿಸಬೇಕಿತ್ತು.

ಆದರೆ ಖಾಸಗಿ ಶಾಲೆಗಳ ಸಂಘಟನೆಗಳು, ಈ ಕ್ರಮವು RTE ಕಾಯ್ದೆಯ ವ್ಯಾಪ್ತಿಯನ್ನು ಮೀರಿದ್ದು ಹಾಗೂ ಸರ್ಕಾರ ಪೂರ್ವಭಾವಿ ಸಮಾಲೋಚನೆ ನಡೆಸಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದವು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಮಧ್ಯಂತರ ತಡೆ ನೀಡಿದ್ದು, ಮುಂದಿನ ವಿಚಾರಣೆ ನಡೆಯುವವರೆಗೆ ಸರ್ಕಾರದ ಆದೇಶ ಜಾರಿಯಾಗುವುದಿಲ್ಲ. ಈ ಪ್ರಕರಣದ ಅಂತಿಮ ತೀರ್ಪು ಸಾವಿರಾರು SC/ST ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದು, ಶಿಕ್ಷಣ ಇಲಾಖೆ ಹಾಗೂ ಖಾಸಗಿ ಶಾಲೆಗಳ ವಲಯದಲ್ಲಿ ಕುತೂಹಲ ಮೂಡಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular