ಹಲವು ಪ್ರಕರಣಗಳಲ್ಲಿ ಸರ್ಕಾರಕ್ಕೆ ಹಿನ್ನಡೆ, ಮುಜುಗರ: ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಲು ಸರ್ಕಾರದ ಪರ ವಕೀಲರಿಗೆ ಸಿಎಂ ಸೂಚನೆ

ಬೆಂಗಳೂರು: ಸರ್ಕಾರವು ತನ್ನ ಎಲ್ಲಾ ಕಾನೂನು ಪ್ರತಿನಿಧಿಗಳಿಂದ ಫಲಿತಾಂಶ ಆಧಾರಿತ ಕ್ರಮವನ್ನು ನಿರೀಕ್ಷಿಸುತ್ತದೆ ಎಂದು ಮುಖ್ಯಮಂತಿ ಸಿದ್ಧರಾಮಯ್ಯ ಹೇಳಿದ್ದಾರೆ.

ಹೆಚ್ಚುವರಿ ಅಡ್ವೊಕೇಟ್ ಜನರಲ್‌ಗಳ ಕಾರ್ಯನಿರ್ವಹಣಾ ಸಭೆಯಲ್ಲಿ ಅವರು ಮಾತನಾಡಿ, ಸಾಂವಿಧಾನಿಕ ಮೌಲ್ಯಗಳನ್ನು ಕಾಪಾಡುವುದು ಮತ್ತು ಜನರಿಗೆ ಸೇವೆ ಸಲ್ಲಿಸುವುದು ಮೊದಲ ಆದ್ಯತೆಯಾಗಬೇಕು ಎಂಬ ಕಾರಣಕ್ಕೆ ಕಾರ್ಯಕ್ಷಮತೆಯಲ್ಲಿನ ಲೋಪಗಳು ಬದಲಾವಣೆಗೆ ಕಾರಣವಾಗುತ್ತವೆ ಎಂದು ಹೇಳಿದ್ದಾರೆ.

ನ್ಯಾಯಾಲಯಗಳಲ್ಲಿ ಸರ್ಕಾರದ ಪರ ವಕೀಲರು ಪರಿಣಾಮಕಾರಿಯಾಗಿ ವಾದ ಮಂಡಿಸದ ಕಾರಣಕ್ಕೆ ಹಲವು ಪ್ರಕರಣಗಳಲ್ಲಿ ನಾವು ಹಿನ್ನಡೆ ಅನುಭವಿಸುವಂತಾಗಿದೆ. ಸರ್ಕಾರಕ್ಕೆ ಅನುಕೂಲಕರವಾದ ಕೇಸ್‌ಗಳಲ್ಲಿ ಸಹ ಆದೇಶಗಳು ನಮ್ಮ ವಿರುದ್ಧವಾಗಿ ಬರುತ್ತಿವೆ. ಕೋಮುವಾದ, ದ್ವೇಷ ಭಾಷಣ ಮುಂತಾದ ಪ್ರಕರಣಗಳಲ್ಲಿ ಪೊಲೀಸ್ ಎಫ್.ಐ.ಆರ್ ದಾಖಲಾದ ನಂತರ ಕೂಡ ಸುಲಭವಾಗಿ ತಡೆಯಾಜ್ಞೆ ದೊರೆಯುತ್ತದೆ. ತಡೆಯಾಜ್ಞೆಯನ್ನು ವರ್ಷಗಟ್ಟಲೆ ತೆರವುಗೊಳಿಸದೆ ಇಡುವ ಪ್ರಕರಣಗಳು ಕೂಡ ಹೆಚ್ಚಾಗುತ್ತಿವೆ ಎಂದು ಹೇಳಿದ್ದಾರೆ.

ಕೆಲವು ಸಂದರ್ಭಗಳಲ್ಲಿ ಸಣ್ಣಪುಟ್ಟ ಪ್ರಕರಣಗಳಲ್ಲಿ ಸಹ ಸರ್ಕಾರಕ್ಕೆ ಮುಜುಗುರವಾಗುವಂತಹ ಬೆಳವಣಿಗೆಗಳು ಆಗಿವೆ. ನಿಮ್ಮ ತಪ್ಪುಗಳಿಂದ ನಮಗೆ ಮುಜುಗರವುಂಟಾಗುವ ಪರಿಸ್ಥಿತಿ ಬರಬಾರದು. ನೀವೆಲ್ಲರೂ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಬೇಕು. ಇದಕ್ಕೆ ತಪ್ಪಿದಲ್ಲಿ ನಿಮ್ಮನ್ನು ಬದಲಾಯಿಸುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read